ಮಹಾರಾಷ್ಟ್ರ : ಅಂಬೇಡ್ಕರ್ ಜಯಂತಿಯ ಪ್ರಯುಕ್ತ 18 ಸಾವಿರ ನೋಟ್‌ಬುಕ್‌ಗಳನ್ನು ಬಳಸಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರವನ್ನು ರಚಿಸಲಾಗಿದ್ದು, ಮಹಾರಾಷ್ಟ್ರದ ಲಾತೂರ್‌ನಲ್ಲಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ. Mosaic ಕಲಾ ಶೈಲಿಯಲ್ಲಿ ತಯಾರಾದ ಈ ಭಾವಚಿತ್ರದ ಹಿಂದೆ 18 ಕಲಾವಿದರ ಕೈಚಳಕವಿದೆ.
ಪ್ರತಿವರ್ಷ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ. ಭಾರತದ ಸಂವಿಧಾನ ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಡಾ. ಬಿ. ಆರ್ ಅಂಬೇಡ್ಕರ್ ಅವರ ಗೌರವಾರ್ಥವಾಗಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ ಎಂದು ಭಾವಚಿತ್ರ ಪ್ರದರ್ಶನದ ಮುಂದಾಳತ್ವ ವಹಿಸಿದ್ದ ಲಾತೂರ್ ಬಿಜೆಪಿ ಲೋಕಸಭಾ ಸದಸ್ಯ ಸುಧಾಕರ ಶ್ರಂಗಾರೆ ಹೇಳಿದ್ದಾರೆ.
11 ಸಾವಿರ ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ 100*110 ಅಡಿ ಎತ್ತರದ ಭಾವಚಿತ್ರವನ್ನು ತಯಾರಿಸಲಾಗಿದೆ.
ಸಾಮಾಜಿಕ ಬದ್ಧತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಪ್ರದರ್ಶನದ ನಂತರ ಈ ಪುಸ್ತಕಗಳನ್ನು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಹಂಚಲಾಗುತ್ತದೆ ಎಂದು ಸುಧಾಕರ ಶ್ರಂಗಾರೆ ತಿಳಿಸಿದ್ದಾರೆ.
ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…
ಆದಿತ್ಯ ಧರ್ ನಿರ್ದೇಶನದ ರಣವೀರ್ ಸಿಂಗ್ ಅಭಿನಯದ ಧುರಂಧರ್ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…
ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್.28) 120 ಕೋಟಿ ರೂ…
ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…
ಬೆಂಗಳೂರು: ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್ ಕುಮಾರ್…