BREAKING NEWS

ಅಮೆರಿಕ, ಭಾರತದ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ; ಶ್ವೇತಭವನದಲ್ಲಿ ಪ್ರಧಾನಿ ಮೋದಿ

ವಾಷಿಂಗ್ಟನ್: ಅಮೆರಿಕ ಹಾಗೂ ಭಾರತದ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಅಮೆರಿಕದ ಶ್ವೇತಭವನದ ಆವರಣದಲ್ಲಿ ಭಾರತೀಯ ಸಮುದಾಯದವರು ಮತ್ತು ಇತರ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ಮೌಲ್ಯಗಳನ್ನು ಉಭಯ ರಾಷ್ಟ್ರಗಳು ಗೌರವಿಸುತ್ತವೆ. ಹಲವು ಕ್ಷೇತ್ರಗಳ ಅಭಿವೃದ್ಧಿಗೆ ಸಹಕಾರ, ಪರಸ್ಪರ ನೆರವು ನೀಡಲಾಗುತ್ತಿದೆ. ಅಮೆರಿಕದ ಜನತೆಗೆ ದೇವರ ಆಶೀರ್ವಾದ ಸದಾ ಇರಲಿದೆ ಎಂದು ಹೇಳಿದರು. ಜತೆಗೆ, ತಮಗೆ ಆತ್ಮೀಯ ಸ್ವಾಗತ ಕೋರಿದ ಅಧ್ಯಕ್ಷ ಜೋ ಬೈಡನ್​​ ಹಾಗೂ ಅಮೆರಿಕದ ಜನತೆಗೆ ಧನ್ಯವಾದ ಸಮರ್ಪಿಸಿದರು.

ಮೋದಿ ಅವರು ಶ್ವೇತಭವನದಲ್ಲಿ ಭಾಷಣ ಮಾಡುತ್ತಿರುವುದು ಇದು ಎರಡನೇ ಬಾರಿ ಆಗಿದೆ. ಜಾಗತಿಕ ಶಾಂತಿಗಾಗಿ ಜತೆಯಾಗಿ ಕೆಲಸ ಮಾಡಲು ಭಾರತ-ಅಮೆರಿಕ ಬದ್ಧವಾಗಿವೆ ಎಂದು ಮೋದಿ ಹೇಳಿದರು. ಭಾರತೀಯ ಸಮುದಾಯದವರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, ಅವರನ್ನುದ್ದೇಶಿಸಿ ‘ನೀವು ಭಾರತ ನಿಜವಾದ ಶಕ್ತಿ’ ಎಂದು ಬಣ್ಣಿಸಿದರು.

ಮೂರು ದಶಕದ ಹಿಂದೆ ನಾನು ಸಾಮಾನ್ಯ ವ್ಯಕ್ತಿಯಾಗಿ ಅಮೇರಿಕಾ ಪ್ರವಾಸಕ್ಕೆ ಬಂದಿದ್ದೆ. ಆಗ ವೈಟ್ ಹೌಸ್ ಅನ್ನು ಹೊರಗಡೆಯಿಂದ ನೋಡಿದ್ದೆ. ಈಗ ಪ್ರಧಾನಿಯಾಗಿ ಇಲ್ಲಿಗೆ ಬಂದಿದ್ದೇನೆ. ಮೊದಲ ಬಾರಿಗೆ ಇಷ್ಟು ಪ್ರಮಾಣದ ಭಾರತೀಯರನ್ನು ನೋಡುತ್ತಿದ್ದೇನೆ. ಭಾರತೀಯ ಸಮುದಾಯದ ಜನರು ತಮ್ಮ ಜ್ಞಾನ, ಶಕ್ತಿ, ಸಾಮರ್ಥ್ಯ, ನಿಷ್ಠೆಯಿಂದ ಅಮೇರಿಕಾದಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದೇಶಗಳ ನಡುವೆ ಸಂಬಂಧ ಹೆಚ್ಚಿಸುತ್ತಿದ್ದಾರೆ ಎಂದು ಮೋದಿ ಹೇಳಿದರು.

ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿ ಶ್ವೇತಭವನಕ್ಕೆ ಕರೆದೊಯ್ದ ಜೋ ಬೈಡನ್ ಅವರು, ಅಮೆರಿಕ ಹಾಗೂ ಭಾರತದ ನಡುವೆ ಉತ್ತಮ ಬಾಂಧವ್ಯ ಇದೆ. ಉಭಯ ರಾಷ್ಟ್ರಗಳು 3 ಪದಗಳ ‘ವಿ ದ ಪೀಪಲ್’​ ಬಾಂಧವ್ಯ ಹೊಂದಿದ್ದೇವೆ. ಹಲವು ವಿಚಾರಗಳಲ್ಲಿ ಅಮೆರಿಕ-ಭಾರತ ನಡುವೆ ಸಾಮ್ಯತೆ ಇದೆ. ಉಭಯ ದೇಶಗಳ ನಡುವೆ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಎರಡೂ ರಾಷ್ಟ್ರಗಳ ನಡುವಣ ಸ್ನೇಹ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ. 21ನೇ ಶತಮಾನದ ಅತ್ಯಂತ ನಿರ್ಣಾಯಕ ಸಂಬಂಧಗಳಲ್ಲಿ ಇದು ಒಂದಾಗಿದೆ. ಇಂಡೋ-ಪೆಸಿಫಿಕ್​​ ಸಂಬಂಧ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದರು.

ಮೋದಿ ಅವರನ್ನು ಶ್ವೇತಭವನದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿರುವ ಭಾರತೀಯ ಸಮುದಾಯದ ಜನರು ಮತ್ತು ಇತರ ಅತಿಥಿಗಳು ಸ್ವಾಗತಿಸಿದರು.

ಶ್ವೇತಭವನದ ಆವರಣಕ್ಕೆ ಆಗಮಿಸಿದ ಮೋದಿ ಅವರಿಗೆ ಅಮೆರಿಕದ ಸೇನಾ ಪಡೆಗಳು ಗೌರವ ಸಲ್ಲಿಸಿದರು. ಮೋದಿ ಅವರು ಸೇನಾಪಡೆಗಳ ಗೌರವ ವಂದನೆ ಸ್ವೀಕರಿಸಿದ ನಂತರ ‘ಮೋದಿ ಮೋದಿ’ ಘೋಷಣೆ ಕೇಳಿಬಂತು.

ಮೋದಿ – ಬೈಡನ್ ದ್ವಿಪಕ್ಷೀಯ ಮಾತುಕತೆ

ಪ್ರಧಾನಿ ಮೋದಿ ಹಾಗೂ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಮಾತುಕತೆ ನಡೆಸಿದರು. ರಕ್ಷಣೆ, ವ್ಯಾಪಾರ, ವಿಜ್ಞಾನ ತಂತ್ರಜ್ಞಾನ, ಶಿಕ್ಷಣ, ಪರಿಸರ ಸಂರಕ್ಷಣೆ ಸೇರಿದಂತೆ ಮಹತ್ವದ ಜಾಗತಿಕ ವಿದ್ಯಮಾನಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು. ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಅನೇಕ ಒಪ್ಪಂದಹಗಳಿಗೆ ಉಭಯ ನಾಯಕರು ಸಹಿ ಹಾಕಿದರು.

andolanait

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

3 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

3 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

4 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

4 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

5 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

8 hours ago