ಕ್ಯಾಲಿಫೋರ್ನಿಯಾ : ಅಮೆರಿಕಾದ ಖ್ಯಾತ ಅರ್ಥಶಾಸ್ತ್ರಜ್ಞೆ ಕ್ಲಾಡಿಯಾ ಗೋಲ್ಡಿನ್ ಅವರು 2023ರ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಮಹಿಳಾ ಕಾರ್ಮಿಕ ಮಾರುಕಟ್ಟೆ ಫಲಿತಾಂಶಗಳ ಕುರಿತಂತೆ ನಮ್ಮ ಜ್ಞಾನವನ್ನು ಹೆಚ್ಚಿಸಿದ್ದಕ್ಕಾಗಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸಾಯನ್ಸಸ್ ಹೇಳಿದೆ.
ಈ ವರ್ಷದ ನೊಬೆಲ್ ಪ್ರಶಸ್ತಿಗಳ ಪೈಕಿ ಇತರ ಕ್ಷೇತ್ರಗಳ ಪ್ರಶಸ್ತಿಯನ್ನು ಈಗಾಗಲೇ ಘೋಷಿಸಲಾಗಿದ್ದು ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿ ಈ ಬಾರಿಯ ಕೊನೆಯ ಪ್ರಶಸ್ತಿಯಾಗಿದೆ.
ನೊಬೆಲ್ ಪ್ರಶಸ್ತಿಯನ್ನು ಆರಂಭಿಸಿದ್ದ ಆಲ್ಫ್ರೆಡ್ ನೊಬೆಲ್ ಮೊದಲು ವಿಜ್ಞಾನ, ಸಾಹಿತ್ಯ ಮತ್ತು ಶಾಂತಿ ನೊಬೆಲ್ ಪ್ರಶಸ್ತಿಯನ್ನು ಆರಂಭಿಸಿದ್ದರೆ ಅರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಯನ್ನು ಸ್ವೀಡನ್ ದೇಶದ ಸೆಂಟ್ರಲ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ 1968ರಲ್ಲಿ ಸೇರಿಸಲಾಗಿತ್ತು.
1969ರಲ್ಲಿ ಮೊದಲ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿ ನೀಡಲಾಯಿತು. ಈ ಹಿಂದೆ ಈ ಪ್ರಶಸ್ತಿಯನ್ನು ಫ್ರೀಡ್ರಿಕ್ ಆಗಸ್ಟ್ ವೊನ್ ಹಯೆಕ್, ಮಿಲ್ಟನ್ ಫ್ರೀಡ್ಮ್ಯಾನ್ ಮತ್ತು ಪೌ, ಕ್ರಗ್ಮ್ಯಾನ್‌ನಂತಹ ಖ್ಯಾತ ಅರ್ಥಶಾಸ್ತ್ರಜ್ಞರು ಗೆದ್ದಿದ್ದರು.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…