Mysore
26
broken clouds

Social Media

ಗುರುವಾರ, 09 ಏಪ್ರಿಲ 2026
Light
Dark

ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಡಿಕ್ಕಿ : ಮೂವರ ದುರ್ಮರಣ

ಚಿತ್ರದುರ್ಗ : ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ ತಮಿಳುನಾಡಿಗೆ ತೆರಳುತ್ತಿತ್ತು. ಅಹ್ಮದಾಬಾದ್‌ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ಅಂಬುಲೆನ್ಸ್‌ನಲ್ಲಿದ್ದ ಚಾಲಕ, ಕನಕಮಣಿ (72) ಮತ್ತು ಆಕಾಶ್ (17) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್‌ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!