ಚಿತ್ರದುರ್ಗ : ನಿಂತಿದ್ದ ಲಾರಿಗೆ ಅಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಮಲ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅಂಬುಲೆನ್ಸ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್ ಶವ ಸಾಗಿಸುತ್ತಿದ್ದು, ಗುಜರಾತ್‌ನಿಂದ ತಮಿಳುನಾಡಿಗೆ ತೆರಳುತ್ತಿತ್ತು. ಅಹ್ಮದಾಬಾದ್‌ನಿಂದ ತಿರುನಾಳವೇಲಿಗೆ ತೆರಳುತ್ತಿದ್ದ ಸಂದರ್ಭ ಮಲ್ಲಾಪುರ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಅಪಘಾತದಿಂದ ಅಂಬುಲೆನ್ಸ್‌ನಲ್ಲಿದ್ದ ಚಾಲಕ, ಕನಕಮಣಿ (72) ಮತ್ತು ಆಕಾಶ್ (17) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಂಬುಲೆನ್ಸ್‌ನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…