ಚಾಮರಾಜನಗರ : ಚಾರ್ಜ್ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವರಿಗೆ ಸೇರಿದ ಬೈಕ್ ಇದಾಗಿದ್ದು, ಚಾರ್ಜ್ ಆದ ಬಳಿಕ ಬೈಕ್ ಸ್ಟಾರ್ಟ್ ಮಾಡಿದ ವೇಳೆ ಹೊಗೆ ಕಾಣಿಸಿಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಹೊಗೆ ಕಂಡು ಆತಂಕದಿಂದ ಹಿಂದೆ ಸರಿದಿದ್ದು, ಕ್ಷಣಾರ್ಧದಲ್ಲೇ ದಿಢೀರ್ ಬೆಂಕಿಯ ಜ್ವಾಲೆ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಪಕ್ಕದಲ್ಲೇ ನಿಲ್ಲಿಸಿದ್ದ ಮತ್ತೊಂದು ಬೈಕ್ ಹಾಗೂ ಮನೆಗೆ ಬೆಂಕಿ ವ್ಯಾಪಿಸಿಲ್ಲ. ಕೂಡಲೇ, ಕೆಲ ಯುವಕರು ಸೇರಿ ಉರಿಯುತ್ತಿದ್ದ ಬೈಕ್ಗೆ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ.
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…