BREAKING NEWS

ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಾಘಾತದಿಂದ ಸಾವು

ಚಾಮರಾಜನಗರ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಚುನಾವಣಾ ತರಬೇತಿ ಪಡೆಯುತ್ತಿದ್ದ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನೌಕರ  ಸಾವನ್ನಪ್ಪಿದ್ದಾರೆಂದು ಕಾಮಗೆರೆ ಆಸ್ಪತ್ರೆ ವೈದ್ಯರು ಘೋಷಣೆ ಮಾಡಿದ್ದರು. ಆದರೆ, ಆ ನೌಕರನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯವಾಗ ದೇಹದ ಕೈ-ಕಾಲುಗಳನ್ನು ಅಲುಗಾಡಿಸಿದ್ದಾರೆಂದು ಕುಟುಂಬ ವರ್ಗದವರು ತಿಳಿಸಿದ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆ ಸಿಬ್ಬಂದಿ ಅವರನ್ನು ಎದ್ದು ಕೂರಿಸಿ ಮರಳಿ ಚಿಕಿತ್ಸೆಗೆ ಕರೆದೊಯ್ದಿದ್ದಾರೆ. ಆದರೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನೌಕರ ಮೃತಪಟ್ಟಿದ್ದಾರೆ ಎಂದು ಮತ್ತೊಮ್ಮೆ ದೃಢಪಡಿಸಲಾಯಿತು. 
ಸರ್ಕಾರಿ ಖಜಾನೆ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಜಗದೀಶ್ (40) ಅವರು ಮಂಗಳವಾರ ಬೆಳಗ್ಗೆ ಚಾಮರಾಜನಗರ ಜಿಲ್ಲೆ ಹನೂರಿನ ವಿವೇಕಾನಂದ ಶಾಲೆಯಲ್ಲಿ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಹಾಜರಾಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ. ಇವರನ್ನು ಪಟ್ಟಣದ ಕಾಮಗೆರೆ ಆಸ್ಪತ್ರೆಗೆ ಕೊಂಡೊಯ್ದಾಗ ಹೃದಯಾಘಾತದಿಂದ ಸಾವಾಗಿದೆ ಎಂದು ಆಸ್ಪತ್ರೆ ವೈದ್ಯರು ಘೋಷಣೆ ಮಾಡಿದ್ದಾರೆ. ನಂತರ ಜಗದೀಶ್ ದೇಹವನ್ನು ಮರಣೋತ್ತರ ಪರೀಕ್ಷೆಗೆ ಹನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದಾಗ  ಅವರು ಕೈ ಕಾಲು ಅಲ್ಲಾಡಿಸಿದ್ದಾರೆಂದು ಹೇಳಲಾಗಿದೆ. 
ಮೈಸೂರಿಗೆ ರವಾನೆ:  ತಕ್ಷಣ  ಬಗ್ಗೆ ಆಸ್ಪತ್ರೆ ಸಿಬ್ಬಂದಿ ಮತ್ತು ನೌಕರನ ಕುಟುಂಬಸ್ಥರು ಜಗದೀಶ್‌ ಅವರನ್ನು ಶವಾಗಾರದಿಂದ ಪುನಃ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.  ಸರ್ಕಾರಿ ಆಸ್ಪತ್ರೆ ವೈದ್ಯರು ನೌಕರನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ  ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ಮೈಸೂರಿನ ವೈದ್ಯರು ನೌಕರ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. 

https://andolana.in/districts/chamarajanagar/staff-died-of-heart-attack-during-election-training/

lokesh

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

9 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

10 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

10 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

10 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

11 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

11 hours ago