ಆಂಧ್ರ ಮುಖ್ಯಮಂತ್ರಿ ವಿರುದ್ಧ 11 ಕೇಸ್‌ ದಾಖಲಿಸಿದ ಹೈಕೋರ್ಟ್

ವಿಜಯವಾಡ: ಹಿಂದಿನ ಸರ್ಕಾರದ ಅವಧಿಯಲ್ಲಿ ಪ್ರತಿಪಕ್ಷ ನಾಯಕರಾಗಿದ್ದಾಗ ನ್ಯಾಯಾಲಯದ ಬಗ್ಗೆ ನೀಡಿದ್ದ ಹೇಳಿಕೆಗಳ ಸಂಬಂಧ ಆಂಧ್ರಪ್ರದೇಶದ ಹಾಲಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವಿರುದ್ಧ ಆಂಧ್ರಪ್ರದೇಶ ಹೈಕೋರ್ಟ್ ಸ್ವಯಂಪ್ರೇರಿತವಾಗಿ 11 ಪ್ರಕರಣಗಳನ್ನು ದಾಖಲಿಸಿಕೊಂಡಿದೆ.

ಇದರ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಕಣ್ಣಂಗೇಟಿ ಲಲಿತಾ, ಪೊಲೀಸರಿಗೆ ನೋಟಿಸ್ ಜಾರಿ ಮಾಡುವುದನ್ನು ತಪ್ಪಿಸಿದ್ದಾರೆ. ಆದರೆ ಹೈಕೋರ್ಟ್‌ನ ಆಡಳಿತಾತ್ಮಕ ಸಮಿತಿಯ ಶಿಫಾರಸಿನ ಮೇರೆಗೆ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಳ್ಳಲಾಗಿದೆ.

ವಿಪಕ್ಷದಲ್ಲಿದ್ದ ಸಂದರ್ಭದಲ್ಲಿ ಜಗನ್ ಮೋಹನ್ ಅಡ್ವೊಕೇಟ್ ಜನರಲ್ ಸುಬ್ರಮಣ್ಯಂ ಶ್ರೀರಾಮ್ ವಿರುದ್ಧ ಹಾಗೂ ನ್ಯಾಯಾಲಯದ ಕುರಿತು ವಿವಾದಿತ ಹೇಳಿಕೆ ನೀಡಿದ್ದರು.

× Chat with us