ಮುಂಬೈ : ಉದ್ಯಮಿ ಮುಕೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿಯವರ ಪತ್ನಿ ಟೀನಾ ಅವರು ಜುಲೈ 4ರಂದು ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದಾರೆ.
ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿಯಲ್ಲಿ ದಾಖಲಾಗಿರುವ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಹಾಜರಾಗಿದ್ದಾರೆ.
ಅನಿಲ್ ಅಂಬಾನಿ ಅವರನ್ನು ತನಿಖಾ ಸಂಸ್ಥೆ ಪ್ರಶ್ನಿಸಿದ ಒಂದು ದಿನದ ನಂತರ ಟೀನಾ ಅಂಬಾನಿ ಇಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇದು ಅಂಬಾನಿ ಕಂಪನಿಗಳಲ್ಲಿನ ಹೂಡಿಕೆಗೆ ಸಂಬಂಧಿಸಿದ ಹೊಸ ಪ್ರಕರಣ ಎಂದು ಮೂಲಗಳು ತಿಳಿಸಿವೆ.
64 ವರ್ಷದ ಅನಿಲ್ ಅಂಬಾನಿ ಅವರು ಈ ಹಿಂದೆ 2020 ರಲ್ಲಿ ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಹಾಗೂ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದರು.
ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿ 814 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ 420 ಕೋಟಿ ರೂ. ತೆರಿಗೆ ವಂಚನೆ ಆರೋಪದ ಮೇಲೆ ಕಳೆದ ವರ್ಷ ಆಗಸ್ಟ್ ನಲ್ಲಿ ಆದಾಯ ತೆರಿಗೆ ಇಲಾಖೆ ಅನಿಲ್ ಅಂಬಾನಿ ಅವರಿಗೆ ಕಪ್ಪುಹಣ ತಡೆ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿತ್ತು.
ಇದೀಗ ಫಾರೀನ್ ಎಕ್ಸ್ಚೇಂಜ್ ನಿಯಮಗಳ ಉಲ್ಲಂಘನೆಯ ಆರೋಪಗಳಿರುವ ಹೊಸ ಪ್ರಕರಣವೊಂದು ದಾಖಲಾಗಿದ್ದು, ಆ ಸಂಬಂಧ ಅನಿಲ್ ಅಂಬಾನಿ ಮತ್ತು ಈಗ ಟೀನಾ ಅಂಬಾನಿ ವಿಚಾರಣೆ ನಡೆಯುತ್ತಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…