ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಹಾಗೂ ಬಹುತೇಕ ಜನಸಾಮಾನ್ಯರು ಕಾತುರದಿಂದ ನಿರೀಕ್ಷಿಸುತ್ತಿರುವ ಅನ್ನಭಾಗ್ಯ ಯೋಜನೆಯು ಈ ಮೊದಲು ಪ್ರಕಟಿಸಿದ್ದಂತೆ ಜು. 1ರ ಬದಲಿಗೆ ಆ. 1ರಿಂದ ಆರಂಭವಾಗಲಿದೆ ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರವು ಹಿಂದೆ ಅನ್ನಭಾಗ್ಯ ಯೋಜನೆಯು ಜು. 1ರಿಂದ ಜಾರಿಗೊಳಿಸುವುದಾಗಿ ಹೇಳಿತ್ತು. ಆದರೆ, ಕೇಂದ್ರದಿಂದ ಆಹಾರ ಭದ್ರತೆ ಕಾಯ್ದೆಯಡಿ ಸರಬರಾಜು ಆಗುತ್ತಿದ್ದ ಅಕ್ಕಿಯನ್ನು ನಿಲ್ಲಿಸಿದ ಕಾರಣ, ಅನ್ಯ ರಾಜ್ಯಗಳಿಂದ ಅಕ್ಕಿ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು. ಈಗಾಗಲೇ ಛತ್ತೀಸ್ ಗಢ ಹಾಗೂ ಪಂಜಾಬ್ ರಾಜ್ಯಗಳು ಅಕ್ಕಿ ಕೊಡುವುದಾಗಿ ಒಪ್ಪಿವೆ. ಛತ್ತೀಸ್ ಗಢದಿಂದ 1.4 ಮೆಟ್ರಿಕ್ ಟನ್ ಅಕ್ಕಿ ತರಿಸಿಕೊಳ್ಳುವ ಬಗ್ಗೆ ಮಾತುಕತೆಗಳು ನಡೆದಿವೆ ಎಂದು ಸಚಿವರು ತಿಳಿಸಿದರು.
ಅನ್ನಭಾಗ್ಯ ಯೋಜನೆಗೆ ಮೂರು ತೊಡಕುಗಳು ಇದ್ದು ಸದ್ಯಕ್ಕೆ ಅವು ನಿವಾರಣೆಯಾಗದ ಕಾರಣ ಯೋಜನೆಯ ಜಾರಿಯಲ್ಲಿ ವಿಳಂಬವಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ. ಅವುಗಳನ್ನು ಇಲ್ಲಿ ಉಲ್ಲೇಖಿಸಲಾಗಿದೆ.
ಅಗತ್ಯ ಅಕ್ಕಿಯನ್ನು ಅಲ್ಲಿಂದ ಅಕ್ಕಿಯನ್ನು ಸರಬರಾಜು ಮಾಡಿಕೊಂಡು ಜನರಿಗೆ ಕೊಡುತ್ತೇವೆ. ಛತ್ತೀಸ್‌ಗಡದವರು 1.5 ಲಕ್ಷ ಟನ್ ಅಕ್ಕಿ ಕೊಡ್ತೇವೆ ಅಂದಿದ್ದಾರೆ. ತೆಲಂಗಾಣದವ್ರು ಗೋಧಿ ಕೊಡುತ್ತೇವೆ ಸಚಿವ ಮುನಿಯಪ್ಪ ಹೇಳಿದ್ದಾರೆ. ಪಂಜಾಬ್ ರಾಜ್ಯದವರು ಕೂಡಾ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ. ಆದರೆ, ಈ ರಾಜ್ಯಗಳಿಂದ ನಮಗೆ ಸಾಗಾಟಕ್ಕೆ ಸಾರಿಗೆ ವೆಚ್ಚ ಜಾಸ್ತಿ ಆಗಲಿದೆ. ಕೇಂದ್ರದ ಸಂಸ್ಥೆಗಳಾದರೆ ಅವರೇ ತರಿಸಿಕೊಂಡು ನಮಗೆ ಡೆಲಿವರಿ ಕೊಡುತ್ತಾರೆ ಎಂದರು. ಈ ವಾರದಲ್ಲೇ ರೇಟ್ ಫಿಕ್ಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೇಂದ್ರ ಆಹಾರ ಸಚಿವ ಪಿಯೂಶ್ ಗೋಯೆಲ್ ಅವರು ನವದೆಹಲಿಯಲ್ಲಿ ಜೂ. 21ರಂದು ಸುದ್ದಿಗೋಷ್ಠಿ ನಡೆಸಿ, “ನಾವು ಕರ್ನಾಟಕ ಮಾತ್ರವಲ್ಲ ಮಧ್ಯಪ್ರದೇಶ, ಆಂಧ್ರಪ್ರದೇಶ, ತಮಿಳುನಾಡು ಸೇರಿ ಹಲವಾರು ರಾಜ್ಯಗಳಿಂದ ಬಂದಿರುವ ಅಕ್ಕಿ ಪೂರೈಕೆ ಬೇಡಿಕೆಯನ್ನ ನಿರಾಕರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಆದರೆ, ಈ ಮಾತನ್ನು ರಾಜ್ಯ ಕಾಂಗ್ರೆಸ್ ನಾಯಕರು ಒಪ್ಪುತ್ತಿಲ್ಲ. ನೀವು ಈಗಾಗಲೇ ಕೊಡುತ್ತಿದ್ದ ಅಕ್ಕಿಯನ್ನೇ ಮುಂದುವರಿಸಿ. ಅದನ್ನು ನಿಲ್ಲಿಸಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎನ್‌ಸಿಬಿ ದಾಳಿ ವೇಳೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸೀಮಾ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್‌ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…