Mysore
23
drizzle

Social Media

ಗುರುವಾರ, 12 ಡಿಸೆಂಬರ್ 2024
Light
Dark

ಅನ್ನಭಾಗ್ಯ: ಕಮಿಟ್ವೆಂಟ್ ಪತ್ರ ಹಾಕಿ ಬಿಜೆಪಿಗೆ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತೀಯ ಆಹಾರ ನಿಗಮ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟೆಂಟ್‌ ಪತ್ರ ತೋರಿಸಿ ಎಂದು ಸವಾಲು ಹಾಕಿದ್ದ ಬಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಅವರು ನೀಡಿದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಕಮಿಟ್ಟೆಂಟ್ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಲಗತ್ತಿಸಿರುವ ಸಿದ್ದರಾಮಯ್ಯ, ಇಂಥ ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಎಂದು ಛೇಡಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ ಸವಾಲು ಹಾಕಿದ್ದರು. ಇಲ್ಲಿದೆ ಎಫ್.ಸಿ.ಐ ಕಮಿಟೆಂಟ್ ಪತ್ರ

ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು’ ಎಂದು ಹೇಳಿದ್ದಾರೆ.

ಅಲ್ಲದೆ, ‘ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ’ ಎಂದು ನುಡಿದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ