ಬೆಂಗಳೂರು: ಭಾರತೀಯ ಆಹಾರ ನಿಗಮ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟೆಂಟ್ ಪತ್ರ ತೋರಿಸಿ ಎಂದು ಸವಾಲು ಹಾಕಿದ್ದ ಬಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ಅವರು ನೀಡಿದ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಕಮಿಟ್ಟೆಂಟ್ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಲಗತ್ತಿಸಿರುವ ಸಿದ್ದರಾಮಯ್ಯ, ಇಂಥ ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಎಂದು ಛೇಡಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ ಸಿ.ಟಿ ಸವಾಲು ಹಾಕಿದ್ದರು. ಇಲ್ಲಿದೆ ಎಫ್.ಸಿ.ಐ ಕಮಿಟೆಂಟ್ ಪತ್ರ
ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು’ ಎಂದು ಹೇಳಿದ್ದಾರೆ.
ಅಲ್ಲದೆ, ‘ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಬಿಜೆಪಿ ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ’ ಎಂದು ನುಡಿದಿದ್ದಾರೆ.
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ…
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ. ಈ…
ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನ ಮೋಹನ್ ಸಿಂಗ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ…
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಪ್ರಧಾನಿ…