ಬೆಂಗಳೂರು: ಅನ್ನಭಾಗ್ಯ, ಶಕ್ತಿ ಯೋಜನೆಗಳು ಬಡಜನರಿಗೆ ಸಾಕಷ್ಟು ನೆರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.
ವಿಧಾನಮಂಡಲದ ಜಂಟಿ ಅವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು ಶಕ್ತಿ ಯೋಜನೆಗಳಿಂದ ರಾಜ್ಯದ ಪುರಾಣ ಪುಣ್ಯಕ್ಷೇತ್ರಗಳು, ದೇವಸ್ಥಾನಗಳು ತುಂಬಿ ತುಳುಕುತ್ತಿವೆ. ಅನ್ನಭಾಗ್ಯ ಯೋಜನೆ ಅತ್ಯಂತ ಮಹತ್ವದ್ದು. ಸಿದ್ದರಾಮಯ್ಯ ಅವರು ತಮ್ಮ ಅನುಭವದಿಂದ ಯೋಜನೆ ಜಾರಿಗೊಳಿಸಿದ್ದಾರೆ. ತಮಗೂ ಕೂಡ ಬಾಲ್ಯದಲ್ಲಿ ಅನ್ನದ ಮಹತ್ವ ಅರಿತುಕೊಳ್ಳುವಂತಹ ಅನುಭವಗಳಾಗಿವೆ ಎಂದರು.
ಕೇಂದ್ರ ಸರ್ಕಾರ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊಡದೆ ಇರುವುದು ಖಂಡನೀಯ. ಬಿಜೆಪಿಯವರು ಪಂಚ ಖಾತ್ರಿ ಯೋಜನೆಗಳನ್ನು ತಕ್ಷಣದಿಂದಲೇ ಜಾರಿಗೊಳಿಸಿ ಒತ್ತಾಯಿಸಿ ಪ್ರತಿಭಟನೆ ನಡೆಸುವ ನೈತಿಕ ಹಕ್ಕು ಹೊಂದಿಲ್ಲ. ಸರ್ಕಾರ ಹಣಕಾಸು ಸಂಪನ್ಮೂಲಗಳನ್ನು ಹೊಂದಿಸಿಕೊಂಡು ಜಾರಿ ಮಾಡಲಿ ಎಂದು ಸಲಹೆ ನೀಡಿದರು.
ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವ ಜೊತೆಗೆ ಹಗಲು ವೇಳೆಗೆ ವಿದ್ಯುತ್ ನೀಡಬೇಕೆಂದು ಜಿ.ಟಿ.ದೇವೇಗೌಡ ಸಲಹೆ ನೀಡಿದರು.
ಹಿಂದೆ ಕಾಂಗ್ರೆಸ್ ಪಕ್ಷದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಭಟನೆ ಮಾಡಿತ್ತು. ಈಗ ಆ ಪಕ್ಷವೇ ಅಧಿಕಾರಕ್ಕೆ ಬಂದಿರುವುದರಿಂದ ದರವನ್ನು ಕಡಿಮೆ ಮಾಡುವುದು ಅವರ ಕರ್ತವ್ಯ ಎಂದು ಹೇಳಿದರು.
ವಚನ ಸಾಹಿತ್ಯ ಕಾಲದ ಸಿದ್ದಾಂತಗಳನ್ನು ಸ್ಮರಿಸಿಕೊಂಡ ಜಿ.ಟಿ.ದೇವೇಗೌಡ ಅವರು, ದುಡಿದು ತಿನ್ನುವುದು ಸೂಕ್ತ ಎಂದು ಶರಣರು ಹೇಳಿದ್ದಾರೆ. ಸರ್ಕಾರದ ಉಚಿತ ಖಾತ್ರಿಗಳು ಶ್ರಮಿಕರನ್ನು ದುಡಿಮೆಯಿಂದ ವಿಮುಖರನ್ನಾಗಿ ಮಾಡುತ್ತದೆ ಎಂದು ಆರ್ಥಿಕ ತಜ್ಞರ ಅಭಿಪ್ರಾಯ ಎಂದರು.
ರಾಜಕೀಯ ಪಕ್ಷಗಳು ಸೃಜನಶೀಲ ಕಾಯಕ ಮತ್ತು ಉತ್ಪಾದನೆಗೆ ಬೆಂಬಲ ನೀಡಬೇಕೆಂದು ಅವರು ಸಲಹೆ ಕೊಟ್ಟರು.
2013 ಮತ್ತು ಈಗಿನ ರಾಜ್ಯಪಾಲರ ಭಾಷಣಗಳು ಯಥಾವತ್ತು ನಕಲಾಗಿವೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಆದ್ಯತೆ ನೀಡುವುದಾಗಿ ಉಲ್ಲೇಖಿಸಿರುವುದು ನಂಬಲರ್ಹವಲ್ಲ ಎಂದರು.
ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮತ್ತು ಗುಣಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…