ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಭಾರತೀಯ ಆಹಾರ ನಿಗಮ ಅಕ್ಕಿ ಕೊಡಲು ನಿರಾಕರಿಸಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ಸಭೆ ನಿರ್ಧರಿಸಿದೆ.
ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನ ಖಾತೆಗೆ 5 ಕೆಜಿ ಅಕ್ಕಿ ಜೊತೆ ಇನ್ನುಳಿದ 5 ಕೆಜಿ ಅಕ್ಕಿ ಬದಲಿಗೆ ಮಾಸಿಕ ತಲಾ 170 ರುಪಾಯಿ ಹಣ ನೀಡಲು ಸಂಪುಟ ತೀರ್ಮಾನಿಸಿದೆ. ಜುಲೈ 1ರಿಂದಲೇ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುತ್ತದೆ.
ಇಂದು ನಡೆದ ಸಂಪುಟ ಸಭೆ ಬಳಿಕ ಮಾತನಾಡಿದ ಆಹಾರ ಖಾತೆ ಸಚಿವ ಕೆಎಚ್ ಮುನಿಯಪ್ಪನವರು, ಹೆಚ್ಚುವರಿಯಾಗಿ ನೀಡಲು ತೀರ್ಮಾನಿಸಿದ್ದ 5 ಕೆಜಿ ಅಕ್ಕಿಯನ್ನು ಹೊಂದಿಸಲು ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಸಮಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ಕೊಡುವವರೆಗೂ ಹಣವನ್ನು ನೀಡಲಾಗುತ್ತದೆ. ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಮುನಿಯಪ್ಪ ತಿಳಿಸಿದ್ದಾರೆ.
ಉಚಿತ ಅಕ್ಕಿ ನೀಡುವ ಯೋಜನೆ ಜಾರಿಗಾಗಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ಕೇಂದ್ರ ಆಹಾರ ನಿಗಮದ ಮೊರೆ ಹೋಗಿತ್ತು. ಆದರೆ, ಅಲ್ಲಿಂದ ಹೆಚ್ಚುವರಿ ಅಕ್ಕಿ ಪೂರೈಕೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಸಚಿವ ಮುನಿಯಪ್ಪ ಅವರು ಕೇಂದ್ರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆದರೂ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ಸರ್ಕಾರ ನಿರಾಕರಿಸಿತ್ತು
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…