ಬೆಂಗಳೂರು: ರಾಜ್ಯದ 4 ಕೋಟಿ 42 ಲಕ್ಷ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ತಲಾ 170 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಸೇರಿ 1.28 ಕೋಟಿ ಪಡಿತರ ಚೀಟಿದಾರರು ಇದ್ದಾರೆ ಒಟ್ಟಾರೆ 4.42 ಕೋಟಿ ಫಲಾನುಭವಿಗಳು ಇದ್ದಾರೆ. ಇದುವರೆಗೂ ಯಾವ ಫಲಾನುಭವಿಗಳು ಹಕ್ಕು ಪಡೆಯುತ್ತಿದ್ದಾರೋ ಅವರಿಗೆ ಹೆಚ್ಚುವರಿ ಅಕ್ಕಿ ನೀಡುವವರೆಗೂ ಪ್ರತಿ ಕೆಜಿ ಗೆ 34 ರೂ. ನಂತೆ ತಲಾ 170 ರೂ. ನೀಡುತ್ತೇವೆಂದು ಸ್ಪಷ್ಟನೆ ನೀಡಿದರು.
ಇದಕ್ಕೂ ಮುನ್ನ ಮಾತನಾಡಿದ ಕುಮಾರಸ್ವಾಮಿ, ಹೆಚ್ಚುವರಿ 5 ಕೆಜಿ ಅಕ್ಕಿ ನೀಡಲಾಗುತ್ತಿಲ್ಲ ಎಂದು ಸರ್ಕಾರ ಹಣ ನೀಡುತ್ತಿದೆ ಅದಕ್ಕೆ ತಕರಾರು ಇಲ್ಲ ಆದರೆ ಅನ್ನಭಾಗ್ಯದ ಹಣ ವರ್ಗಾವಣೆ ಮಾಡಲು ಸಾಕಷ್ಟು ಅಡೆತಡೆಗಳಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದರು.
ಆ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಕಾನೂನು ಸಚಿವ ಎಚ್ ಕೆ ಪಾಟೀಲ್ ಯಾವ ಅಧಿಕಾರಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ ಅವರ ಹೆಸರು ಹೇಳಿ ಅನ್ನಭಾಗ್ಯದ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ವಿಚಾರದಲ್ಲಿ ಸಮರ್ಥಿಸಿಕೊಂಡರು.
ಆಗ ಕುಮಾರಸ್ವಾಮಿ ಅವರು ಜನರನ್ನು ದಾರಿ ತಪ್ಪಿಸುವ ಅಧಿಕಾರಿಯನ್ನು ಗುರುತಿಸುವುದು ನಿಮ್ಮ ಜವಾಬ್ದಾರಿ ಎಂದು ಕಾನೂನು ಸಚಿವರಿಗೆ ತಿರುಗೇಟು ನೀಡಿದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…