ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ.
ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಅಧಿಕಾರ ಸ್ಥಾಪಿಸುವ ಕುರಿತು ಚಿಂತನೆ ನಡೆಸಿತ್ತು. ಅದರಲ್ಲಿಯೂ ಮುಖ್ಯವಾಗಿ ತಮಿಳುನಾಡಿನಲ್ಲಿ ಕಮಲ ಅರಳಿಸುವ ಕುರಿತು ಹಲವು ಸಾಹಸಗಳನ್ನು ಮಾಡಿತ್ತು.
ಅಣ್ಣಾಮಲೈ ಅವರು ಪ್ರಧಾನಿಯನ್ನು ಹಲವು ಬಾರಿ ತಮಿಳುನಾಡಿಗೆ ಕರೆ ತಂದರೂ ಸಹ ಇಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಯಾವುದೇ ಒಂದು ಸೀಟನ್ನು ಗೆಲ್ಲದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.
ಇಲ್ಲಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಅಣ್ಣಾಮಲೈಗೆ ಹಿನ್ನಡೆ ಉಂಟಾಗಿದೆ. ಗಣಪತಿ ರಾಜ್ ಕುಮಾರ್ ವಿರುದ್ಧ 30 ಸಾವಿರ ಅಂತರಗಳ ಹಿನ್ನಡೆ ಅನುಭವಿಸುವ ಮೂಲಕ ಸೋಲಿಗೆ ಶರಣಾಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೆ ಬಾಕಿಯಿದೆ.
ಮದ್ಯಾಹ್ನ 3 ಗಂಟೆ ವೇಳೆಗೆ ಡಿಎಂಕೆ ಪಕ್ಷದ ಗಣಪತಿ ರಾಜ್‌ಕುಮಾರ್ 158051 ಮತ ಪಡೆದು ಮುನ್ನಡೆ ಸಾಧಿಸಿದರೆ, 127315 ಮತ ಪಡೆದಿರುವ ಬಿಜೆಪಿಯ ಅಣ್ಣಾಮಲೈ ಹಿನ್ನಡೆ ಅನುಭವಿಸಿದ್ದಾರೆ. ಈ ಇಬ್ಬರ ನಡುವಿನ ಅಂತರ 30736 ಮತಗಳಾಗಿವೆ.
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…