BREAKING NEWS

Loksabha Election Results 2024: ತಮಿಳುನಾಡಿನಲ್ಲಿ ಬಿಜೆಪಿಗೆ ಮುಖಭಂಗ; ಅಣ್ಣಾಮಲೈಗೆ ಸೋಲು

ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್‌ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಅಧಿಕಾರ ಸ್ಥಾಪಿಸುವ ಕುರಿತು ಚಿಂತನೆ ನಡೆಸಿತ್ತು. ಅದರಲ್ಲಿಯೂ ಮುಖ್ಯವಾಗಿ ತಮಿಳುನಾಡಿನಲ್ಲಿ ಕಮಲ ಅರಳಿಸುವ ಕುರಿತು ಹಲವು ಸಾಹಸಗಳನ್ನು ಮಾಡಿತ್ತು.

ಅಣ್ಣಾಮಲೈ ಅವರು ಪ್ರಧಾನಿಯನ್ನು ಹಲವು ಬಾರಿ ತಮಿಳುನಾಡಿಗೆ ಕರೆ ತಂದರೂ ಸಹ ಇಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಯಾವುದೇ ಒಂದು ಸೀಟನ್ನು ಗೆಲ್ಲದ ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

ಇಲ್ಲಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಅಣ್ಣಾಮಲೈಗೆ ಹಿನ್ನಡೆ ಉಂಟಾಗಿದೆ. ಗಣಪತಿ ರಾಜ್‌ ಕುಮಾರ್‌ ವಿರುದ್ಧ 30 ಸಾವಿರ ಅಂತರಗಳ ಹಿನ್ನಡೆ ಅನುಭವಿಸುವ ಮೂಲಕ ಸೋಲಿಗೆ ಶರಣಾಗಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೆ ಬಾಕಿಯಿದೆ.

ಮದ್ಯಾಹ್ನ 3 ಗಂಟೆ ವೇಳೆಗೆ ಡಿಎಂಕೆ ಪಕ್ಷದ ಗಣಪತಿ ರಾಜ್‌ಕುಮಾರ್‌ 158051 ಮತ ಪಡೆದು ಮುನ್ನಡೆ ಸಾಧಿಸಿದರೆ, 127315 ಮತ ಪಡೆದಿರುವ ಬಿಜೆಪಿಯ ಅಣ್ಣಾಮಲೈ ಹಿನ್ನಡೆ ಅನುಭವಿಸಿದ್ದಾರೆ. ಈ ಇಬ್ಬರ ನಡುವಿನ ಅಂತರ 30736 ಮತಗಳಾಗಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

8 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

9 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

10 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

10 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

14 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

14 hours ago