ಹಾವೇರಿ : ಯುವ ರೈತರಿಗೆ ಕನ್ಯೆ ಕೊಡಲು ಹಿಂದೇಟು ಹಾಕುತ್ತಿರುವುದಕ್ಕೆ ಬೇಸತ್ತ ಯುವಕರು, ಸಿಎಂ ಸಿದ್ದರಾಮಯ್ಯ ಪತ್ರ ಬರೆದು ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಿದ್ದಾರೆ.
ಹಾವೇರಿಯ ಯುವ ರೈತರು ಕನ್ಯಾಭಾಗ್ಯ ಆರಂಭಿಸುವಂತೆ ಪತ್ರದ ಮೂಲಕ ಮನವಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 5 ರಿಂದ 6 ಎಕರೆ ಜಮೀನು ಇದ್ದರು ಸಹಿತ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಕೃಷಿಕ ಎಂದ ಮಾತ್ರಕ್ಕೆ ಎಷ್ಟೋ ಜನ ಕನ್ಯೆಯನ್ನು ತೊರಿಸುತ್ತಿಲ್ಲ. 5 ಸಾವಿರ ಸಂಬಳ ಬರುವ ವ್ಯಕ್ತಿಗೆ ಹೆಣ್ಣು ಕೊಡಲು ಮುಂದಾಗುತ್ತಾರೆ.
ನಾವು ಕೂಡ ಉತ್ತಮ ಮಳೆ ಬಂದರೆ ಲಕ್ಷಾಂತರ ರೂಪಾಯಿ ಗಳಿಸುತ್ತೇವೆ. ಆದರೆ ಹವಾಮಾನ ವೈಪರೀತ್ಯದಿಂದ ನಷ್ಟ ಅನುಭವಿಸುತ್ತಿದ್ದೇವೆ. ಕೃಷಿ ಮಾಡುತ್ತಿರುವವರು ಕೂಡ ತನ್ನ ಮಗಳನ್ನು ಕೃಷಿಕನಿಗೆ ಕೊಡಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂಬಂಧ ಯುವ ರೈತರನ್ನು ಮದುವೆ ಆದ ಯುವತಿಯರಿಗೆ ಕನಿಷ್ಠ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಬೇಕು.
ರೈತರನ್ನು ಮದುವೆ ಆದ ವಿದ್ಯಾವಂತ ಯುವತಿಯರಿಗೆ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರಿಯಲ್ಲಿ ಮೀಸಲಾತಿ ನೀಡಬೇಕು. ಮನೆಯೊಡತಿಗೆ 2 ಸಾವಿರ ಕೊಡುವ ಮಾದರಿಯಲ್ಲಿ ರೈತರನ್ನು ಮದುವೆ ಆದವರಿಗೂ ಹಣ ಕೊಡಬೇಕು. ಇಂತಹ ಕಾರ್ಯಕ್ರಮಗಳನ್ನೊಳಗೊಂಡ ಕನ್ಯಾಭಾಗ್ಯ ಯೋಜನೆ ಜಾರಿಗೆ ತರಬೇಕೆಂದು ಪತ್ರ ಮೂಲಕ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…