ಬೆಂಗಳೂರು: ರಾಜ್ಯ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸಿಹಿ ಸುದ್ದಿ ನೀಡಿದ್ದು, ಬಾಕಿ ದಂಡ ಪಾವತಿಗೆ ಮತ್ತೆ ಶೇ. 50ರಷ್ಟು ರಿಯಾಯಿತಿ ಘೋಷಣೆ ಮಾಡಿದೆ.
ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ ಮಾಡಿದ್ದು, ಸೆಪ್ಟೆಂಬರ್ 9ರವರೆಗೆ ದಂಡದ ಅರ್ಧದಷ್ಟು ಹಣ ಪಾವತಿಸಲು ವಾಹನ ಸವಾರರಿಗೆ ಅವಕಾಶ ಕಲ್ಪಿಸಲಾಗಿದೆ.
ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ. 50 ರಷ್ಟು ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ಸಾರಿಗೆ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…