ಬೆಂಗಳೂರು: ನಿಮಾನ್ಸ್ ಮತ್ತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್ ಪಟ್ಟಿಯ ವೈದ್ಯಕೀಯ ರ‍್ಯಾಂಕಿಂಗ್ ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ.
ರಾಜ್ಯದ ವೈದ್ಯಕೀಯ ಕಾಲೇಜುಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ನಿರೀಕ್ಷೆಯಂತೆಯೇ ದಿಲ್ಲಿಯ ಏಮ್ಸ್ ಈ ರಾಷ್ಟ್ರೀಯ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ತಮಿಳು ನಾಡಿನ ವೆಲ್ಲೂರಿನಲ್ಲಿ ಕ್ರಿಶ್ಚಿನ್ ಮೆಡಿಕಲ್ ಕಾಲೇಜ್ ಮೂರನೇ ಸ್ಥಾನದಲ್ಲಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್ ರಾಜನ್ ಸಿಂಗ್ ಸೋಮವಾರ ವಾರ್ಷಿಕ ರ‍್ಯಾಂಕಿಂಗ್ ಪಟ್ಟಿಯನ್ನು ನವ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.
ಮಣಿಪಾಲದ ಕಸ್ತುರ್ಬಾ ಮೆಡಿಕಲ್ ಕಾಲೇಜು ಟಾಪ್ 10ರ ಪಟ್ಟಿಯಲ್ಲಿದ್ದು, 9ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿ ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು 14 ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜು 20ನೇ ಸ್ಥಾನ, ಮಂಗಳೂರಿನ ಕಸ್ತುರ್ಬಾ ಮೆಡಿಕಲ್ ಕಾಲೇಜು 21 ಸ್ಥಾನ ಪಡೆದಿವೆ. ಬೆಂಗಳೂರಿನ ಎಂ ಎಸ್ ರಾಮಯ್ಯ ಮೆಡಿಕಲ್ ಕಾಲೇಜು 30 ನೇ ಸ್ಥಾನದಲ್ಲಿದೆ. ಮಂಗಳೂರಿನ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿ 36ನೇ ಸ್ಥಾನ ಪಡೆದುಕೊಂಡಿದೆ.
ರಾಜ್ಯದ ಎಂಜಿನಿಯರಿಂಗ್ ಕಾಲೇಜುಗಳ ಪಟ್ಟಿಯಲ್ಲಿ ಸುರತ್ಕಲ್‌ನ ಎನ್‌ಐಟಿ ಮೊದಲ ಸ್ಥಾನ ಪಡೆದುಕೊಂಡಿದೆ. ರಾಷ್ಟ್ರೀಯ ಪಟ್ಟಿಯಲ್ಲಿ ಈ ಕಾಲೇಜು 13ನೇ ಸ್ಥಾನದಲ್ಲಿದೆ. ಮಣಿಪಾಲ್‌ನ ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 45ನೇ ಸ್ಥಾನ ಪಡೆದುಕೊಂಡಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 55 ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಎಂ.ಎಸ್. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 59ನೇ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್ ಟೆಕ್ನಾಲಜಿ 62 ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್ ಕಾಲೇಜು 70 ನೇ ಸ್ಥಾನದಲ್ಲಿದೆ. ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್ 73, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 91, ಬೆಂಗಳೂರಿನ ಪಿಇಎಸ್ ಯೂನಿರ್ವಸಿಟಿ 93 ನೇ ಸ್ಥಾನ ಪಡೆದುಕೊಂಡಿವೆ.