ರಾಮನಗರ : ಹಾಲಿನ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.
ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಬಳಿ ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹಾಲಿನ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಪಕ್ಕದ ರಸ್ತೆಗೆ ಕಾರು ಉರುಳಿದ್ದು, ಗಾಯಾಳುಗಳನ್ನ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ನಿಯಂತ್ರಸಲು ಇತ್ತೀಚೆಗಷ್ಟೇ ಸ್ಪೀಡ್ ಡಿಟೆಕ್ಟರ್ ಅಳವಡಿಸಲಾಗಿದೆ. ವಾಹನಗಳಿಗೆ ವೇಗಮಿತಿ ನಿಗದಿಪಡಿಸುವ ಜೊತೆಗೆ ಬೈಕ್, ಆಟೋ ಟ್ರ್ಯಾಕ್ಟರ್‌ಗಳಿಗೆ ನಿಷೇಧ ಹೇರಲಾಗಿದೆ. ವಾಹನ ಸವಾರರೂ ಸಹ ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ.
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…
ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…