Mysore
26
broken clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮತ್ತೊಂದು ಅಪಘಾತ: ಒರ್ವ ಸಾವು

ರಾಮನಗರ: ವೇಗವಾಗಿ ಬಂದ ಕಾರು ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸಾವಿಗೀಡಾಗಿ ಮೂರು ಮಂದಿ ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಸಮೀಪ ಇರುವ ಚಾಮುಂಡೇಶ್ವರಿ ಆಸ್ಪತ್ರೆ ಮುಂಭಾಗದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇ ನಲ್ಲಿ ಸಂಭವಿಸಿದೆ.

ಮಂಜೇಶ್ (28) ಮೃತ ದುರ್ದೈವಿ. ಈತ ಮದ್ದೂರು ತಾಲೂಕಿನ ಡಣಾಯಕನ ಪುರ ಗ್ರಾಮದ ನಿವಾಸಿ.

ಮೈಸೂರು ಕಡೆಯಿಂದ ಬರುತ್ತಿದ್ದ ಟಾಟಾ ಇಂಡಿಕಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಡಿವೈಡರ್‌ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲನೆ ಮಾಡುತ್ತಿದ್ದ ಮಂಜೇಶ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಇನ್ನು ಗಾಯಗೊಂಡಿರುವವರನ್ನು ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸಂಚಾರ ವ್ಯತ್ಯಯ: ರಸ್ತೆ ಅಪಘಾತದ ಹಿನ್ನೆಲೆಯಲ್ಲಿ ಬೆಂ-ಮೈ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಭಾನುವಾರವಾಗಿರುವ ಕಾರಣ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿತ್ತು. ಅಪಘಾತದಿಂದಾಗಿ ಕೆಲಕಾಲ ಟ್ರಾಫಿಕ್‌ಜಾಮ್ ಆಗಿ ಪ್ರಯಾಣಿಕರು ಪರದಾಡುವಂತಾಗಿತ್ತು.
ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷ ಕೃಷ್ಣ ಮತ್ತು ಸಿಬ್ಬಂದಿ ತೆರಳಿ ಸಂಚಾರ ಸುಗಮ ಗೊಳಿಸಿದರು. ಈ ಸಂಬಂಧ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!