BREAKING NEWS

ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು: 4 ತಿಂಗಳಲ್ಲಿ 8ನೇ ಮರಣ!

ಮಧ್ಯ ಪ್ರದೇಶ: ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರೆದಿದೆ. ಮಧ್ಯ ಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿದೆ. ಗಂಡು ಚೀತಾ ಇದೀಗ ಸಾವನ್ನಪ್ಪಿದ್ದು, ಕಳೆದ ನಾಲ್ಕು ತಿಂಗಳಲ್ಲಿ ಮೃತಪಟ್ಟ 8ನೇ ಚೀತಾ ಇದಾಗಿದೆ.

ಗುರುವಾರ ಬೆಳಗ್ಗೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸೂರಜ್ ಎಂಬ ಹೆಸರಿನ ಆಫ್ರಿಕಾ ಮೂಲದ ಚೀತಾದ ಮೃತ ದೇಹ ಪತ್ತೆಯಾಗಿದೆ. ಕುನೋ ರಾಷ್ಟ್ರೀಯ ಉದ್ಯಾನದ ಅಧಿಕಾರಿಗಳು ಸೂರಜ್ ಚೀತಾ ಸಾವಿಗೆ ನಿಖರ ಕಾರಣವೇನು ಎಂದು ಪತ್ತೆ ಹಚ್ಚಲು ತನಿಖೆ ಶುರು ಮಾಡಿದ್ದಾರೆ. ಚೀತಾದ ಮರಣೋತ್ತರ ಪರೀಕ್ಷಾ ವರದಿಯು ಇದರ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲಿದೆ.

ಕಳೆದ ಮಂಗಳವಾರ ಕೂಡಾ ತೇಜಸ್ ಹೆಸರಿನ ಗಂಡು ಚೀತಾ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಸಾವನ್ನಪ್ಪಿತ್ತು. ಹೆಣ್ಣು ಚೀತಾ ಜೊತೆಗಿನ ಕಾದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ತೇಜಸ್ ಚೀತಾ ಚೇತರಿಕೆ ಕಾಣದೆ ಸಾವನ್ನಪ್ಪಿತ್ತು. ಮರಣೋತ್ತರ ಪರೀಕ್ಷಾ ವರದಿ ಕೂಡಾ ಇದೇ ಅಂಶವನ್ನು ಬಹಿರಂಗಪಡಿಸಿತ್ತು.

ಕಳೆದ ಮಾರ್ಚ್ 27 ರಂದು ಸಾಶಾ ಹೆಸರಿನ ಹೆಣ್ಣು ಚೀತಾ ಸಾವನ್ನಪ್ಪಿತ್ತು. ಕಿಡ್ನಿ ವೈಫಲ್ಯದಿಂದ ಈ ಚೀತಾ ಕೊನೆಯುಸಿರೆಳೆದಿತ್ತು. ಏಪ್ರಿಲ್ 23 ರಂದು ಉದಯ್ ಹೆಸರಿನ ಗಂಡು ಚೀತಾ ಹೃದಯ ಸಂಬಂಧಿ ಸಮಸ್ಯೆಯಿಂದ ಸಾವನ್ನಪ್ಪಿತ್ತು. ಇನ್ನು ಮೇ 9 ರಂದು ದಿಶಾ ಎಂಬ ಹೆಣ್ಣು ಚೀತಾ ಕೂಡಾ ಸಾವನ್ನಪ್ಪಿತ್ತು. ಗಂಡು ಚೀತಾ ಜೊತೆ ಮಿಲನದ ವೇಳೆ ಕಾದಾಟ ನಡೆದು ಈ ಚೀತಾ ಕೊನೆಯುಸಿರೆಳೆದಿತ್ತು. ಇದಲ್ಲದೆ ಮೇ 25 ರಂದು ಹವಾಮಾನ ವೈಪರೀತ್ಯದಿಂದ ನಿರ್ಜಲೀಕರಣಕ್ಕೆ ಒಳಗಾಗಿ ಎರಡು ಚೀತಾ ಮರಿಗಳು ಸಾವನ್ನಪ್ಪಿದ್ದವು.

ಭಾರತದಲ್ಲಿ ಕಣ್ಮರೆಯಾದ ಚೀತಾ ಪ್ರಬೇಧಗಳನ್ನು ಪುನರ್‌ ಸ್ಥಾಪನೆ ಮಾಡಬೇಕೆಂಬುದು ಪ್ರಧಾನಿ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಆಫ್ರಿಕಾದಿಂದ ಚೀತಾಗಳನ್ನು ತರಿಸಲಾಗಿತ್ತು. ಆದರೆ ಈವರೆಗೆ 8 ಚೀತಾಗಳು ಸಾವನ್ನಪ್ಪಿದ್ದು, ಕೇಂದ್ರ ಸರ್ಕಾರದ ಯೋಜನೆಗೆ ಭಾರೀ ಹಿನ್ನಡೆಯಾಗಿದೆ.

ಈ ಹಿಂದೆ 6 ಚೀತಾಗಳು ಸಾವನ್ನಪ್ಪಿದ್ದ ವೇಳೆ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ನಿರ್ವಹಣಾ ಲೋಪ ಇದೆಯೇ ಎಂಬ ಆರೋಪಗಳು ಕೇಳಿ ಬಂದಿದ್ದವು. ಆದ್ರೆ, ಕೇಂದ್ರ ಸರ್ಕಾರ ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿತ್ತು. ಚೀತಾಗಳ ಸಾವಿಗೆ ನಿರ್ವಹಣಾ ಲೋಪ ಕಾರಣವಲ್ಲ ಎಂದು ಹೇಳಿತ್ತು. ಇನ್ನು ಮೂರು ಚೀತಾ ಮರಿಗಳ ಸಾವಿನ ವಿಚಾರದಲ್ಲೂ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿತ್ತು. ಜಾಗತಿಕ ವನ್ಯಜೀವಿ ಅಂಕಿ ಅಂಶಗಳ ಪ್ರಕಾರ ನವಜಾತ ಚೀತಾ ಮರಿಗಳ ಮರಣ ಪ್ರಮಾಣ ಶೇ. 90ರಷ್ಟು ಇದೆ ಎಂದು ಮಾಹಿತಿ ನೀಡಿತ್ತು.

ಭಾರತಕ್ಕೆ ಚೀತಾಗಳನ್ನು ತರುವ ವಿಚಾರ ಸಂಬಂಧ ಕಳೆದ ಮೇನಲ್ಲಿ ಪ್ರತಿಕ್ರಿಯೆ ನೀಡಿದ್ದ ದಕ್ಷಿಣ ಆಫ್ರಿಕಾ ವನ್ಯಜೀವಿ ತಜ್ಞ ವಿನ್ಸೆಂಟ್ ವಾನ್ ಡೆರ್ ಮರ್ವೆ, ಸಾಕಷ್ಟು ಚೀತಾಗಳು ಸಾವನ್ನಪ್ಪುತ್ತವೆ ಎಂದು ಭವಿಷ್ಯ ನುಡಿದಿದ್ದರು. ಚೀತಾಗಳು ತಮ್ಮ ಗಡಿಯನ್ನು ನಿಗದಿ ಮಾಡಿಕೊಳ್ಳುವ ವೇಳೆ ಅರಣ್ಯದಲ್ಲಿ ಚಿರತೆ ಹಾಗೂ ಹುಲಿಗಳ ಜೊತೆ ಕಾದಾಟ ನಡೆಸುವ ಸಾಧ್ಯತೆಗಳು ಇರುತ್ತವೆ ಎಂದೂ ಹೇಳಿದ್ದರು.

andolanait

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

8 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

21 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

21 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

21 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

21 hours ago