ಕುನೋ : ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಅನಾರೋಗ್ಯದಿಂದ 6 ವರ್ಷದ ಗಂಡು ಚೀತಾ ‘ಉದಯ್’ ಮೃತಪಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು.
ಏಪ್ರಿಲ್ 23ರ ಭಾನುವಾರ ಬೆಳಗ್ಗೆಯಿಂದ ಅಸ್ವಸ್ಥಗೊಂಡಿದ್ದ ಚೀತಾವನ್ನು ವನ್ಯಜೀವಿ ವೈದ್ಯರು ಚಿಕಿತ್ಸೆ ಮತ್ತು ಮೇಲ್ವಿಚಾರಣೆಗಾಗಿ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ 4 ಗಂಟೆ ಸಮಯದಲ್ಲಿ ಚೀತಾ ಮೃತಪಟ್ಟಿದೆ. ಉದಯ್ ಚೀತಾ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ್ ಮಾಹಿತಿ ನೀಡಿದ್ದಾರೆ. ಪಶುವೈದ್ಯಕೀಯ ತಂಡ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಲಿದೆ. ಸಂಪೂರ್ಣ ಮರಣೋತ್ತರ ಪರೀಕ್ಷೆಯನ್ನು ವಿಡಿಯೋ ಮತ್ತು ಛಾಯಾಗ್ರಹಣ ಮಾಡಲಾಗುತ್ತದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವದ ಚೀತಾ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಕುನೋ ನ್ಯಾಷನಲ್ ಪಾರ್ಕ್ಗೆ ತರಲಾಗಿದ್ದ ಚೀತಾ ಸಾಶಾ ಕಳೆದ ಮಾರ್ಚ್ ತಿಂಗಳಲ್ಲಿ ಸಾವನ್ನಪ್ಪಿತ್ತು. ಕಳೆದ 3 ತಿಂಗಳಿಂದ ಈ ಚೀತಾ ಅನಾರೋಗ್ಯದಿಂದ ಬಳಲುತ್ತಿದ್ದು ಅದರ ಸಾವಿಗೆ ಕಿಡ್ನಿ ಸೋಂಕು ಕಾರಣ ಎಂದು ತಿಳಿದುಬಂದಿತ್ತು. ಆದ್ರೆ ಉದಯ್ ಚೀತಾ ಸಾವಿಗೆ ಮರಣೋತ್ತರ ಪರೀಕ್ಷೆ ವರದಿ ಬಳಿಕ ಕಾರಣ ತಿಳಿಯಲಿದೆ.
ಈ ವರ್ಷ ಫೆಬ್ರವರಿ 18 ರಂದು ಇತರ 11 ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಕುನೊಗೆ ಕರೆತರಲಾಗಿತು. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇದು ಎರಡನೇ ಚೀತಾ ಸಾವಾಗಿದೆ. ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಇಪ್ಪತ್ತು ಚೀತಾಗಳನ್ನು ತರಲಾಗಿತು. ಕಳೆದ ವರ್ಷ ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾದ ಎಂಟು ಚೀತಾಗಳಲ್ಲಿ ಒಂದಾದ ಸಾಶಾ ಮಾರ್ಚ್‌ನಲ್ಲಿ ಮೃತಪಟ್ಟಿತ್ತು. ಭಾನುವಾರ ಎರಡನೇ ಚೀತಾ ಸಾವಿನೊಂದಿಗೆ, ಈಗ ಚೀತಾಗಳ ಸಂಖ್ಯೆ 18 ಕ್ಕೆ ಇಳಿದಿದೆ.
ಮೈಸೂರು : ಮೈಸೂರಿನ ರೇಸ್‌ಕ್ಲಬ್‌ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್‌ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ…