ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿವೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಣಸವಾಡಿ ಔಟರ್ ರಿಂಗ್ ರಸ್ತೆಯಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ದುರಂತವೊಂದು ನಡೆದಿದೆ.
ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಈ ಅಗ್ನಿ ಅವಘಡ ಸಂಭವಿಸಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿ ನಂದಿಸಿ ಮೂವರು ಭದ್ರತಾ ಸಿಬ್ಬಂದಿಗಳನ್ನು ರಕ್ಷಿಸಿದ್ದಾರೆ.ಆದರೆ ಬೆಂಕಿಯ ಕೆನ್ನಾಲಿಗೆಗೆ ಕಟ್ಟಡದೊಳಗಿದ್ದ ವಸ್ತುಗಳು ಭಾಗಶಃ ಸುಟ್ಟುಹೋಗಿವೆ.
ಬೆಂಕಿ ಹೊತ್ತಿಕೊಂಡಿದ್ದ ಬಹುಮಹಡಿ ಕಟ್ಟಡದಲ್ಲಿ ಫರ್ನಿಚರ್ ಶಾಪ್,ಕೋಚಿಂಗ್ ಸೆಂಟರ್ ಹಾಗೂ ಐಟಿ ಕಂಪನಿಗಳು ಕಾರ್ಯ ನಿರ್ವಹಿಸುತ್ತಿದ್ದವು.
ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿದೆ ಎಂದು ಹೇಳಲಾಗುತ್ತಿದೆ. ಆದರೆ ಇನ್ನೂ ಕೂಡ ನಿಖರ ಕಾರಣ ತಿಳಿದು ಬಂದಿಲ್ಲ.