ಲಂಡನ್: ಕೆಲ ದಿನಗಳ ಹಿಂದಷ್ಟೇ ಹೈದರಬಾದ್ನ 27 ವರ್ಷದ ಮಹಿಳೆಯನ್ನು ಚೂರಿಯಲ್ಲಿ ಇರಿದು ಕೊಲೆ ಮಾಡಿರುವ ಘಟನೆ ಲಂಡನ್ನಲ್ಲಿ ನಡೆದಿತ್ತು. ಇದೀಗ ಲಂಡನ್ ನಲ್ಲಿ ಮತ್ತೆ ಮತ್ತೊಬ್ಬ ಭಾರತೀಯ ಮೂಲದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ.
ಕ್ಯಾಂಬರ್ವೆಲ್ನ ಸೌತಾಂಪ್ಟನ್ ವೇನಲ್ಲಿ ಭಾರತೀಯ ಮೂಲದ ಅರವಿಂದ್ ಶಶಿಕುಮಾರ್ (38) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಶುಕ್ರವಾರ ನಸುಕಿನ 1:30 ರ ವೇಳೆಗೆ ಶಶಿಕುಮಾರ್ ಮೃತಪಟ್ಟಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಈ ಸಂಬಂಧ ಸಲ್ಮಾನ್ ಸಲೀಂ (25) ಎಂಬಾತನನ್ನು ಬಂಧಿಸಿ ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಆರೋಪಿಯನ್ನು ಕ್ರೊಯ್ಡಾನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜೂ.20 ರವರೆಗೆ ಕಸ್ಟಡಿಗೆ ನೀಡಲಾಗಿದೆ.
ಇತ್ತೀಚೆಗಷ್ಟೇ ಲಂಡನ್ನಲ್ಲಿ ಹೈದರಬಾದ್ನ 27 ವರ್ಷದ ಕೊಂತಂ ತೇಜಸ್ವಿನಿಯನ್ನು ಚೂರಿಯಲ್ಲಿ ಇರಿದು ಕೊಲೆ ಮಾಡಲಾಗಿತ್ತು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…