ಬೆಳಗಾವಿ : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಏಕಾಏಕಿ ನಾಮಪತ್ರ ವಾಪಸ್ ಪಡೆದಿರುವುದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಗೋಕಾಕ್ನಲ್ಲೂ ಸಹ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಇದರೊಂದಿಗೆ ಜೆಡಿಎಸ್ ವರಿಷ್ಠರಿಗೆ ಶಾಕ್ ಕೊಟ್ಟಿದ್ದಾರೆ.
ಹೌದು, ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್ ಜೊತಗೆ ಕೈಜೋಡಿಸಿದ್ದಾರೆ. ಇದರೊಂದಿಗೆ ಗೋಕಾಕ್‌ನಲ್ಲಿ ರಮೇಶ್ ಜಾರಕಿಹೊಳಿ ಸೋಲಿಸಲು ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಒಂದಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ.
ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.
ರಮೇಶ್ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಮಧ್ಯೆ ಜಿದ್ದಾಜಿದ್ದಿ ಹೋರಾಟವಿರುವ ಗೋಕಾಕ್ ರಾಜಕೀಯದಲ್ಲಿ ಹೊಸ ಬೆಳವಣಿಗೆ ನಡೆಸಿದ್ದು, ಕಾಂಗ್ರೆಸ್ಗೆ ವರದಾನವಾಗಿದೆ. ಇದರಿಂದ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿಗೆ ಕೊಂಚ ಸಂಕಷ್ಟ ಎದುರಾಗಿದೆ. ಯಾಕಂದ್ರೆ, ಕ್ಷೇತ್ರದ ಅಲ್ಪಸಂಖ್ಯಾತ ಮತಗಳು ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಹರಿದುಹಂಚಿ ಹೋಗಲಿದ್ದು, ಇದರಿಂದ ತಮಗೆ ಲಾಭವಾಗಲಿದೆ ಎನ್ನುವ ನಿರೀಕ್ಷೆಯಲ್ಲಿ ರಮೇಶ್ ಜಾರಕಿಹೊಳಿ ಇದ್ದರು.
ಆದರೆ, ಇದೀಗ ಜೆಡಿಎಸ್ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕೈಕೊಟ್ಟಿದ್ದು, ರಮೇಶ್ ಜಾರಕಿಹೊಳಿ ಲೆಕ್ಕಾಚಾರವೆಲ್ಲ ಉಲ್ಟಾ ಆಗಿದೆ.
ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಕೊನೆಯ ಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದಿರುವ ಗೋಕಾಕ್ ತಾಲೂಕು ಜೆಡಿಎಸ್ ಅಧ್ಯಕ್ಷರೂ ಆಗಿರುವ ಚಂದನ್ ಗಿಡ್ಡನವರ್, ಅವರು ಕಾಂಗ್ರೆಸ್ ಅಭ್ಯರ್ಥಿ ಡಾ.ಮಹಾಂತೇಶ ಕಡಾಡಿಗೆ ಬೆಂಬಲ ಘೋಷಿಸಿದ್ದಾರೆ. ಇದರಿಂದ ಚಂದನ್ ಗಿಡ್ಡನವರ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಜಿಲ್ಲಾ ಜೆಡಿಎಸ್ ನಿರ್ಧಾರ ಮಾಡಿದೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…