Mysore
27
broken clouds

Social Media

ಶನಿವಾರ, 12 ಸೆಪ್ಟೆಂಬರ್ 2026
Light
Dark

ತಿರುಪತಿಯಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ : ತಿರುಮಲ ತಿರುಪತಿ ಕಾಲುದಾರಿಯಲ್ಲಿ ಮತ್ತೊಂದು ಚಿರತೆಯನ್ನು ಸೆರೆಹಿಡಿಯಲಾಗಿದೆ, ನರಸಿಂಹಸ್ವಾಮಿ ದೇವಸ್ಥಾನದ ಬಳಿ 5ನೇ ಚಿರತೆ ಸೆರೆ ಹಿಡಿಯಲಾಗಿದೆ. 4 ದಿನದಿಂದ ಟ್ರ್ಯಾಪ್ ಕ್ಯಾಮರಾ ಮೂಲಕ ಚಿರತೆ ಚಲನವಲನ ಪತ್ತೆ ಮಾಡಲಾಗುತ್ತಿತ್ತು, ಸಿಬ್ಬಂದಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಬೋನ್ ಇಟ್ಟಿದ್ದರು, ಅರಣ್ಯ ಸಿಬ್ಬಂದಿ ಗಂಡು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಚಿರತೆ ಸಂಕುಲವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಅಲಿಪಿರಿ ಪಾದಚಾರಿ ಮಾರ್ಗದ ಉದ್ದಕ್ಕೂ ಬೋನ್‌ಗಳನ್ನು ಬಳಸಲಾಗಿತ್ತು.

ನಾಲ್ಕು ದಿನಗಳ ಹಿಂದೆಯಷ್ಟೇ ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆಯ ಇರುವಿಕೆಯನ್ನು ಪತ್ತೆಹಚ್ಚಲಾಗಿತ್ತು. ಇದಕ್ಕೆ ಸ್ಪಂದಿಸಿದ ತಿರುಮಲ ತಿರುಪತಿ ದೇವಸ್ಥಾನಂ ಅಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಕೂಡಲೇ ಸುತ್ತಮುತ್ತ ಬೋನನ್ನು ಅಳವಡಿಸಿ ರಾತ್ರಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಅಲಿಪಿರಿ-ತಿರುಮಲ ಕಾಲುದಾರಿಯಲ್ಲಿ ಕಳೆದ ಐದು ದಿನಗಳ ಹಿಂದಷ್ಟೇ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿತ್ತು. ಬಾಲಾಜಿಯ ದರ್ಶನಕ್ಕಾಗಿ ತಿರುಪತಿಯಲ್ಲಿದ್ದ ಯಾತ್ರಾರ್ಥಿಗಳಲ್ಲಿ ಆತಂಕ ಮೂಡಿಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!