ಪ್ರಾತಿನಿಧಿಕ ಚಿತ್ರ
ತಿರುಪತಿ : ತಿರುಮಲ ತಿರುಪತಿ ಕಾಲುದಾರಿಯಲ್ಲಿ ಮತ್ತೊಂದು ಚಿರತೆಯನ್ನು ಸೆರೆಹಿಡಿಯಲಾಗಿದೆ, ನರಸಿಂಹಸ್ವಾಮಿ ದೇವಸ್ಥಾನದ ಬಳಿ 5ನೇ ಚಿರತೆ ಸೆರೆ ಹಿಡಿಯಲಾಗಿದೆ. 4 ದಿನದಿಂದ ಟ್ರ್ಯಾಪ್ ಕ್ಯಾಮರಾ ಮೂಲಕ ಚಿರತೆ ಚಲನವಲನ ಪತ್ತೆ ಮಾಡಲಾಗುತ್ತಿತ್ತು, ಸಿಬ್ಬಂದಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಬೋನ್ ಇಟ್ಟಿದ್ದರು, ಅರಣ್ಯ ಸಿಬ್ಬಂದಿ ಗಂಡು ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಚಿರತೆ ಸಂಕುಲವನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಅಲಿಪಿರಿ ಪಾದಚಾರಿ ಮಾರ್ಗದ ಉದ್ದಕ್ಕೂ ಬೋನ್‌ಗಳನ್ನು ಬಳಸಲಾಗಿತ್ತು.
ನಾಲ್ಕು ದಿನಗಳ ಹಿಂದೆಯಷ್ಟೇ ಟ್ರ್ಯಾಪ್ ಕ್ಯಾಮೆರಾದಲ್ಲಿ ಚಿರತೆಯ ಇರುವಿಕೆಯನ್ನು ಪತ್ತೆಹಚ್ಚಲಾಗಿತ್ತು. ಇದಕ್ಕೆ ಸ್ಪಂದಿಸಿದ ತಿರುಮಲ ತಿರುಪತಿ ದೇವಸ್ಥಾನಂ ಅಧಿಕಾರಿಗಳು ಮತ್ತು ಅರಣ್ಯ ಸಿಬ್ಬಂದಿಗಳು ಕೂಡಲೇ ಸುತ್ತಮುತ್ತ ಬೋನನ್ನು ಅಳವಡಿಸಿ ರಾತ್ರಿ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಅಲಿಪಿರಿ-ತಿರುಮಲ ಕಾಲುದಾರಿಯಲ್ಲಿ ಕಳೆದ ಐದು ದಿನಗಳ ಹಿಂದಷ್ಟೇ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿತ್ತು. ಬಾಲಾಜಿಯ ದರ್ಶನಕ್ಕಾಗಿ ತಿರುಪತಿಯಲ್ಲಿದ್ದ ಯಾತ್ರಾರ್ಥಿಗಳಲ್ಲಿ ಆತಂಕ ಮೂಡಿಸಿತ್ತು.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…
ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…