ತಿರುಪತಿ : ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ತಿರುಮಲಕ್ಕೆ ಹೋಗುವ ದಾರಿಯಲ್ಲಿ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಈ ಹಿಂದೆ ಎರಡು ಚಿರತೆಗಳನ್ನು ಸೆರೆಹಿಡಿಯಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.
ಇತ್ತೀಚೆಗೆ ಮಕ್ಕಳ ಮೇಲೆ ಎರಡು ಚಿರತೆಗಳು ದಾಳಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಬಾಲಕನ ಮೇಲೆ ದಾಳಿ ನಡೆಸಿದ ಚಿರತೆಯನ್ನು ಈ ಹಿಂದೆ ಸೆರೆಹಿಡಿಯಲಾಗಿತ್ತು. ಇದೀಗ ಆದಾದ ಮೂರು ದಿನಗಳ ನಂತರ ಮೂರನೇ ಚಿರತೆಯನ್ನು ಸೆರೆಹಿಡಿಯಲಾಗಿದೆ.
ನಾವು ಮೂರನೇ ಚಿರತೆಯನ್ನು ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಸೆರೆಹಿಡಿದಿದ್ದೇವೆ. ಅದೇ ಸ್ಥಳದಲ್ಲಿ ಎರಡನೇ ಚಿರತೆಯನ್ನು ಸೆರೆಹಿಡಿಯಲಾಗಿತ್ತು. ಸುಮಾರು ಐದು ವರ್ಷದ ಗಂಡು ಚಿರತೆ ಇದಾಗಿದೆ ಎಂದು ತಿರುಪತಿ ವಿಭಾಗೀಯ ಅರಣ್ಯಾಧಿಕಾರಿ (ಡಿಎಫ್ಒ) ಎ ಶ್ರೀನಿವಾಸುಲು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಈಗ ಸೆರೆಹಿಡಿದಿರುವ ಚಿರತೆಯನ್ನು ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್‌ನಲ್ಲಿ (ತಿರುಪತಿ ಮೃಗಾಲಯ) 10 ದಿನಗಳವರೆಗೆ ಕ್ವಾರಂಟೈನ್‌ನಲ್ಲಿ ಇಡಲಾಗುವುದು ಮತ್ತು ಮಾನವ ಮಾಂಸವನ್ನು ಸೇವಿಸಿದೆಯೇ ಎಂದು ಪರಿಶೀಲಿಸಲು ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದರು.
ಈಮಧ್ಯೆ, ಎರಡನೇ ಚಿರತೆಯ ಡಿಎನ್‌ಎ ವಿಶ್ಲೇಷಣೆಯ ವರದಿಗಾಗಿ ಇಲಾಖೆ ಇನ್ನೂ ಕಾಯುತ್ತಿದೆ. ಎರಡೂ ಚಿರತೆಗಳ ಡಿಎನ್ಎ ವಿಶ್ಲೇಷಣೆಯ ವರದಿಯನ್ನು ಪರಿಶೀಲಿಸಿದರೆ ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ಯಾವ ಚಿರತೆ ದಾಳಿ ಮಾಡಿದೆ ಎಂಬುದು ಖಚಿತವಾಗಲಿದೆ ಎಂದು ಅವರು ಹೇಳಿದರು.
ತಿರುಮಲಕ್ಕೆ ಹೋಗುವ ಕಾಲ್ನಡಿಗೆ ಮಾರ್ಗದಲ್ಲಿ ಚಿರತೆಗಳ ಚಲನವಲನದ ಇಲಾಖೆ ನಿಗಾವಹಿಸಲಾಗುವುದು ಎಂದು ಶ್ರೀನಿವಾಸಲು ಹೇಳಿದರು.
ಬಾಲಕನ ಮೇಲೆ ದಾಳಿ ನಡೆಸಿದ ನಂತರ ಸೆರೆ ಸಿಕ್ಕ ಮೊದಲ ಚಿರತೆಯನ್ನು ಸುಮಾರು 40 ಕಿಮೀ ದೂರದ ಬಾಕರಾಪೇಟದಲ್ಲಿ ಬಿಡಲಾಗಿದೆ.
ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…
ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…
ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…
೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…
ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…
ಜನಗಣತಿ ಕಾರ್ಯದಲ್ಲಿ ಗಣತಿದಾರರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೂ ಭೇಟಿ ನೀಡಬೇಕು. ಗುರುತಿನ ಚೀಟಿ ಧರಿಸಿ, ಸೌಜನ್ಯದಿಂದ ಮಾಹಿತಿ ಸಂಗ್ರಹಿಸಿ.…