BREAKING NEWS

ತಿರುಮಲಕ್ಕೆ ಹೋಗುವ ದಾರಿಯಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ : ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ತಿರುಮಲಕ್ಕೆ ಹೋಗುವ ದಾರಿಯಲ್ಲಿ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಈ ಹಿಂದೆ ಎರಡು ಚಿರತೆಗಳನ್ನು ಸೆರೆಹಿಡಿಯಲಾಗಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.

ಇತ್ತೀಚೆಗೆ ಮಕ್ಕಳ ಮೇಲೆ ಎರಡು ಚಿರತೆಗಳು ದಾಳಿ ನಡೆಸಿದ ಪ್ರಕರಣ ಬೆಳಕಿಗೆ ಬಂದಿತ್ತು. ಬಾಲಕನ ಮೇಲೆ ದಾಳಿ ನಡೆಸಿದ ಚಿರತೆಯನ್ನು ಈ ಹಿಂದೆ ಸೆರೆಹಿಡಿಯಲಾಗಿತ್ತು. ಇದೀಗ ಆದಾದ ಮೂರು ದಿನಗಳ ನಂತರ ಮೂರನೇ ಚಿರತೆಯನ್ನು ಸೆರೆಹಿಡಿಯಲಾಗಿದೆ.

ನಾವು ಮೂರನೇ ಚಿರತೆಯನ್ನು ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಸೆರೆಹಿಡಿದಿದ್ದೇವೆ. ಅದೇ ಸ್ಥಳದಲ್ಲಿ ಎರಡನೇ ಚಿರತೆಯನ್ನು ಸೆರೆಹಿಡಿಯಲಾಗಿತ್ತು. ಸುಮಾರು ಐದು ವರ್ಷದ ಗಂಡು ಚಿರತೆ ಇದಾಗಿದೆ ಎಂದು ತಿರುಪತಿ ವಿಭಾಗೀಯ ಅರಣ್ಯಾಧಿಕಾರಿ (ಡಿಎಫ್ಒ) ಎ ಶ್ರೀನಿವಾಸುಲು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಈಗ ಸೆರೆಹಿಡಿದಿರುವ ಚಿರತೆಯನ್ನು ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್‌ನಲ್ಲಿ (ತಿರುಪತಿ ಮೃಗಾಲಯ) 10 ದಿನಗಳವರೆಗೆ ಕ್ವಾರಂಟೈನ್‌ನಲ್ಲಿ ಇಡಲಾಗುವುದು ಮತ್ತು ಮಾನವ ಮಾಂಸವನ್ನು ಸೇವಿಸಿದೆಯೇ ಎಂದು ಪರಿಶೀಲಿಸಲು ಡಿಎನ್‌ಎ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಹೇಳಿದರು.

ಈಮಧ್ಯೆ, ಎರಡನೇ ಚಿರತೆಯ ಡಿಎನ್‌ಎ ವಿಶ್ಲೇಷಣೆಯ ವರದಿಗಾಗಿ ಇಲಾಖೆ ಇನ್ನೂ ಕಾಯುತ್ತಿದೆ. ಎರಡೂ ಚಿರತೆಗಳ ಡಿಎನ್ಎ ವಿಶ್ಲೇಷಣೆಯ ವರದಿಯನ್ನು ಪರಿಶೀಲಿಸಿದರೆ ಇತ್ತೀಚೆಗೆ ಅಪ್ರಾಪ್ತ ಬಾಲಕಿ ಮೇಲೆ ಯಾವ ಚಿರತೆ ದಾಳಿ ಮಾಡಿದೆ ಎಂಬುದು ಖಚಿತವಾಗಲಿದೆ ಎಂದು ಅವರು ಹೇಳಿದರು.

ತಿರುಮಲಕ್ಕೆ ಹೋಗುವ ಕಾಲ್ನಡಿಗೆ ಮಾರ್ಗದಲ್ಲಿ ಚಿರತೆಗಳ ಚಲನವಲನದ ಇಲಾಖೆ ನಿಗಾವಹಿಸಲಾಗುವುದು ಎಂದು ಶ್ರೀನಿವಾಸಲು ಹೇಳಿದರು.

ಬಾಲಕನ ಮೇಲೆ ದಾಳಿ ನಡೆಸಿದ ನಂತರ ಸೆರೆ ಸಿಕ್ಕ ಮೊದಲ ಚಿರತೆಯನ್ನು ಸುಮಾರು 40 ಕಿಮೀ ದೂರದ ಬಾಕರಾಪೇಟದಲ್ಲಿ ಬಿಡಲಾಗಿದೆ.

lokesh

Recent Posts

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

2 mins ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

4 mins ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

12 mins ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

24 mins ago

ಪುಸ್ತಕ ಮೇಳದಲ್ಲಿ ‘ಕವಿತೆ ಹೇಳಿ, ಗಿಡ ಪಡೆಯಿರಿ’

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…

36 mins ago