BREAKING NEWS

ಮತ್ತೊಂದು ಅವಘಡ: ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ನಿಂತಿದ್ದ ಜಾಗದ ಬಳಿಯೇ ಬೆಂಕಿ

ಕಾರವಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಬಡಿದು ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ.

ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪಾಡ್ ನ ಪಕ್ಕದಲ್ಲಿಯೇ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಬಳಿಯ ರಾಮತೀರ್ಥ ಬಳಿ ನಡೆದಿದೆ.

ಡಿ.ಕೆ.ಶಿವಕುಮಾರ್ ಅವರು ಹೊನ್ನಾವರ ಬಳಿಯ ರಾಮತೀರ್ಥ ಹೆಲಿಪ್ಯಾಡ್ ಗೆ ಆಗಮಿಸಿದ್ದು, ಹೆಲಿಕಾಪ್ಟರ್ ನಿಲ್ಲಿಸಿದ್ದ ಜಾಗದ ಪಕ್ಕದಲ್ಲಿಯೇ ಬೆಂಕಿ

ಹೊತ್ತಿಕೊಂಡಿದೆ. ಹೆಲಿಕಾಪ್ಟರ್ ಗೆ ಸಿಗ್ನಲ್ ಕೊಡುವ ಸ್ಕೋಕ್ ಕ್ಯಾಂಡಲ್ ನಿಂದಾಗಿ ಹಿಲಿಪ್ಯಾಡ್ ನ ಬಳಿ ಒಣಗಿದ ಹುಲ್ಲಿಗೆ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸಿದ್ದಾರೆ.

ಅದೃಷವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

andolanait

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

12 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

14 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

16 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

16 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

22 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

22 hours ago