ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ವೇ ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.
ಎಕ್ಸ್ ಪ್ರೆಸ್ ವೇ ಉದ್ಘಾಟನೆಯಾದ ನಂತರ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದೀಗ ಮತ್ತೊಂದು ಭೀಕರ ಅಪಘಾತ ನಡೆದಿದೆ. ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವ ಸವಾರರು ಸ್ಥಳದಲ್ಲೇ ದಾರುಣ ಅಂತ್ಯ ಕಂಡಿದ್ದಾರೆ.
ಈ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಮೇಲ್ಸೇತುವೆ ಮೇಲೆ ನಡೆದಿದೆ. ಮೃತರನ್ನು 25 ವರ್ಷದ ಮಣಿ ಮತ್ತು 21 ವರ್ಷದ ಯುವಕ ಜನಾರ್ಧನ ಪೂಜಾರಿ ಎಂದು ಗುರುತಿಸಲಾಗಿದೆ. ಇಬ್ಬರು ಕೋಲಾರ ಹಾಗೂ ಕೊಪ್ಪಳ ಮೂಲದವರು. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ವೀಕೆಂಡ್ ರಜೆ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾವಿನ ಏಕ್ಸ್ ಪ್ರೆಸ್ ವೇ ಎಂಬ ಕುಖ್ಯಾತಿ : ಈ ಎಕ್ಸ್ ಪ್ರೆಸ್ ವೇಯಲ್ಲಿ ಜನವರಿಯಿಂದ ಇಲ್ಲಿಯವರೆಗೂ 110 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು, 50 ಜನ ಮೃತಪಟ್ಟಿದ್ದಾರೆ. 190 ಜನರಿಗೆ ಗಾಯಗಳಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಮೃತಪಟ್ಟಿದ್ದಾರೆ.
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…
ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…
ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…
ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…