BREAKING NEWS

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಭೀಕರ ಅಪಘಾತ : ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ಸಾವಿನ ಹೆದ್ದಾರಿ ಎಂಬ ಕುಖ್ಯಾತಿ ಗಳಿಸುತ್ತಿದೆ. ಪದೇ ಪದೇ ಅಪಘಾತ ಸಂಭವಿಸುತ್ತಿದ್ದು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.

ಎಕ್ಸ್ ಪ್ರೆಸ್ ವೇ ಉದ್ಘಾಟನೆಯಾದ ನಂತರ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಇದೀಗ ಮತ್ತೊಂದು ಭೀಕರ ಅಪಘಾತ ನಡೆದಿದೆ. ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಇಬ್ಬರು ಯುವ ಸವಾರರು ಸ್ಥಳದಲ್ಲೇ ದಾರುಣ ಅಂತ್ಯ ಕಂಡಿದ್ದಾರೆ.

ಈ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಮೇಲ್ಸೇತುವೆ ಮೇಲೆ ನಡೆದಿದೆ. ಮೃತರನ್ನು 25 ವರ್ಷದ ಮಣಿ ಮತ್ತು 21 ವರ್ಷದ ಯುವಕ ಜನಾರ್ಧನ ಪೂಜಾರಿ ಎಂದು ಗುರುತಿಸಲಾಗಿದೆ. ಇಬ್ಬರು ಕೋಲಾರ ಹಾಗೂ ಕೊಪ್ಪಳ ಮೂಲದವರು. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ವೀಕೆಂಡ್​ ರಜೆ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವೇಳೆ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಮದ್ದೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕರ ಶವವನ್ನು ಮದ್ದೂರು ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾವಿನ ಏಕ್ಸ್ ಪ್ರೆಸ್ ವೇ ಎಂಬ ಕುಖ್ಯಾತಿ : ಈ ಎಕ್ಸ್ ಪ್ರೆಸ್ ವೇಯಲ್ಲಿ ಜನವರಿಯಿಂದ ಇಲ್ಲಿಯವರೆಗೂ 110 ಜನ ಪ್ರಾಣ ಕಳೆದುಕೊಂಡಿದ್ದಾರೆ. ರಾಮನಗರ ಜಿಲ್ಲೆಯಲ್ಲಿಯೇ 243 ಅಪಘಾತಗಳು ಸಂಭವಿಸಿದ್ದು, 50 ಜನ ಮೃತಪಟ್ಟಿದ್ದಾರೆ. 190 ಜನರಿಗೆ ಗಾಯಗಳಾಗಿವೆ. ಮಂಡ್ಯ ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 575 ಅಪಘಾತಗಳಾಗಿದ್ದು, 60 ಮಂದಿ ಜನ ಮೃತಪಟ್ಟಿದ್ದಾರೆ.

lokesh

Recent Posts

ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌ ಪ್ರಶ್ನೆ ಇಲ್ಲ: ಸಚಿವ ಕೆ.ಜೆ.ಜಾರ್ಜ್

ಮೈಸೂರು: ವಿದ್ಯುತ್‌ ಕೊರತೆ ಹಾಗೂ ರಾಜ್ಯದ ವಿದ್ಯುತ್‌ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್‌ ರಾಜ್ಯದಲ್ಲಿ ಸದ್ಯಕ್ಕೆ ಲೋಡ್‌ ಶೆಡ್ಡಿಂಗ್‌…

7 mins ago

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

7 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

7 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

7 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

7 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

7 hours ago