BREAKING NEWS

ಬೆಂ-ಮೈ ಎಕ್ಸ್​ಪ್ರೆಸ್​ವೇನಲ್ಲಿ ಮತ್ತೊಂದು ಟೋಲ್ ಪ್ಲಾಜಾ: ಜು.1ರಿಂದ​ ಆರಂಭ- ಇಲ್ಲಿದೆ ಟೋಲ್ ದರ ವಿವರ

 ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಧಿಕ ಟೋಲ್ ಸಂಗ್ರಹಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಅಲ್ಲದೇ ಹೆದ್ದಾರಿಯಲ್ಲಿ ಸರಣಿ ಅಪಘಾತಗಳು ಸಂಭವಿಸುತ್ತಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ ಈ ಹೆದ್ದಾರಿಯಲ್ಲಿ ಮತ್ತೊಂದು ಟೋಲ್ ಗೇಟ್  ಆರಂಭಕ್ಕೆ ಸಜ್ಜಾಗಿದೆ.

ಜುಲೈ 1ರಿಂದ ಮಂಡ್ಯ ವ್ಯಾಪ್ತಿಯ ಟೋಲ್ ಸಂಗ್ರಹ ಆರಂಭವಾಗಲಿದೆ. ಮಂಡ್ಯ ಜಿಲ್ಲೆಯ 55-134 ಕಿಮೀ ವ್ಯಾಪ್ತಿಗೆ ಟೋಲ್ ಸಂಗ್ರಹಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಬಳಿ ಇರುವ ಟೋಲ್ ಪ್ಲಾಜಾ ನಿರ್ಮಿಸಿದೆ. ಹಾಗಾದ್ರೆ, ಯಾವ-ಯಾವ ವಾಹನಗಳಿಗೆ ಎಷ್ಟೆಷ್ಟು ಹಣ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಏಕಮುಖ ಸಂಚಾರಕ್ಕೆ ನಿಗದಿ ಮಾಡಿರುವ ಟೋಲ್ ಹಣ

  • ಕಾರು, ಜೀಪು, ವ್ಯಾನು – 155 ರೂ.
  • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 250 ರೂ.
  • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 525 ರೂ
  • ಮೂರು ಆಕ್ಸಲ್ ವಾಣಿಜ್ಯ ವಾಹನ – 575 ರೂ.
  • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 825 ರೂ.
  • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1005 ರೂ.
  • ಅದೇ ದಿನ ಹೋಗಿಬರುವುದಕ್ಕೆ

    • ಕಾರು, ಜೀಪು, ವ್ಯಾನು – 235 ರೂ
    • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 375 ರೂ
    • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 790 ರೂ
    • ಮೂರು ಆಕ್ಸಲ್ ವಾಣಿಜ್ಯ ವಾಹನ – 860 ರೂ
    • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಲೆಕ್ಸ್‌ಗಳದ್ದು) – 1240 ರೂ
    • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 1510 ರೂ
    • ಮಂಡ್ಯ ಜಿಲ್ಲೆ ಒಳಗಿನ ವಾಹನಗಳಿಗೆ

      • ಕಾರು, ಜೀಪು, ವ್ಯಾನ್‌ – 80 ರೂ.
      • ಲಘು ವಾಣಿಜ್ಯ ವಾಹನ, ಲಘು ಸರಕು ವಾಹನ/ಮಿನಿ ಬಸ್ – 125 ರೂ.
      • ಟ್ರಕ್/ಬಸ್ (ಎರಡು ಆಕ್ಸಲ್ ಗಳದ್ದು) 265 ರೂ.
      • ಮೂರು ಆಕ್ಸಲ್ ವಾಣಿಜ್ಯ ವಾಹನ – 285 ರೂ
      • ಭಾರಿ ನಿರ್ಮಾಣ ಯಂತ್ರಗಳು / ಭೂ ಅಗೆತದ ಸಾಧನಗಳು / ಬಹು ಆಕ್ಸಲ್ ವಾಹನ (4ರಿಂದ 6 ಆಕ್ಸಲ್ ಗಳದ್ದು) – 415 ರೂ
      • ದೊಡ್ಡ ಗಾತ್ರದ ವಾಹನ (7 ಅಥವಾ ಹೆಚ್ಚು ಆಕ್ಸಲ್ ಗಳದ್ದು) – 505 ರೂ
andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

5 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

5 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

5 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

6 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

6 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

6 hours ago