ಒಡಿಶಾ : ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದ ಬೆನ್ನಲ್ಲೇ ಅದೇ ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಗೂಡ್ಸ್ ರೈಲಿಗೆ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಒಡಿಶಾದ ಜಾಜ್’ಪುರ ರೈಲು ನಿಲ್ದಾಣದಲ್ಲಿ ಮನಕಲುಕುವ ದುರ್ಘಟನೆ ಬುಧವಾ ನಡೆದಿದೆ. ಘಟನೆಯಲ್ಲಿ ಮೂರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಲ್ದಾಣದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಗುಡುಗು ಸಹಿತ ಭಾರೀ ಮಳೆ ಸುರಿಯಲಾರಂಭಿಸಿದೆ. ಈ ವೇಳೆ ಅಲ್ಲೇ ನಿಂತಿದ್ದ ಗೂಡ್ಸ್ ರೈಲಿನ ಅಡಿಯಲ್ಲಿ ಕಾರ್ಮಿಕರು ಆಶ್ರಯ ಪಡೆದುಕೊಂಡಿದ್ದಾರೆ.
ಈ ವೇಳೆ ದಿಢೀರನೆ ರೈಲು ಚಲಿಸಲಾರಂಭಿಸಿದ್ದು, ಅದರಡಿಯಲ್ಲಿ ಸಿಲುಕಿ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.ದಿಢೀರ್ ಗುಡುಗು ಸಹಿತ ಮಳೆಯಾಯಿತು. ಗೂಡ್ಸ್ ರೈಲು ನಿಂತಿದ್ದ ರೈಲ್ವೇ ಸೈಡಿಂಗ್‌ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಮಳೆ ಹಿನ್ನೆಲೆಯಲ್ಲಿ ಕಾರ್ಮಿಕರು ರೈಲಿನ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಆದರೆ, ದುರದೃಷ್ಟವಶಾತ್, ಎಂಜಿನ್ ಅನ್ನು ಜೋಡಿಸದ ಗೂಡ್ಸ್ ರೈಲು ಚಲಿಸಲು ಪ್ರಾರಂಭಿಸಿತು, ಇದೇ ಅಪಘಾತಕ್ಕೆ ಕಾರಣವಾಯಿತು ಎಂದು ರೈಲ್ವೇ ವಕ್ತಾರರು ಮಾಹಿತಿ ನೀಡಿದ್ದಾರೆ.
ಘಟನೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.ಗಾಯಗೊಂಡಿರುವ ಕಾರ್ಮಿಕರಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…