ರಾಮನಗರ : ಅಣ್ಣ ಡಿ.ಕೆ.ಶಿವಕುಮಾರ್ ಕಷ್ಟವನ್ನು ನೆನೆದು ಸಹೋದರ ಡಿ.ಕೆ.ಸುರೇಶ್ ಕಣ್ಣೀರು ಹಾಕಿದ ಘಟನೆ ಕನಕಪುರದ ದೊಡ್ಡಾಲಹಳ್ಳಿಯಲ್ಲಿ ನಡೆದಿದೆ. ಸ್ವಗ್ರಾಮ ದೊಡ್ಡಾಲಹಳ್ಳಿಯಲ್ಲಿ ಪ್ರಚಾರ ನಡೆಸುವಾಗ ಸಹೋದರ ಪಡುತ್ತಿರುವ ಕಷ್ಟ ನೆನೆದು ಕಣ್ಣೀರು ಹಾಕಿದರು.
ಕಳೆದ ಎರಡೂವರೆ ವರ್ಷಗಳಿಂದಲೂ ಡಿ.ಕೆ.ಶಿವಕುಮಾರ್ ಸರಿಯಾಗಿ ಊಟ, ನಿದ್ದೆ ಮಾಡಿಲ್ಲ. ಇಂತಹ ಕಷ್ಟದಲ್ಲಿ ಅವರು ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಎಂದು ಕಣ್ಣೀರು ಹಾಕಿದರು.
ಡಿಕೆಶಿ ಗಡ್ಡ ಏಕೆ ಬಿಟ್ಡಿದ್ದಾರೆ ಎಂದು ಕೇಳುತ್ತಾರೆ. ಇದಕ್ಕೆ ಉತ್ತರ ಕೊಡಬೇಕಾಗಿರುವುದು ಕ್ಷೇತ್ರದ ಜನತೆ. ಈಗ ಅದಕ್ಕೆ ಉತ್ತರ ಕೊಡುವ ಕಾಲ ಬಂದಿದ್ದು, ಮೇ13 ರಂದು ಇದಕ್ಕೆ ಉತ್ತರ ಸಿಗಲಿದೆ ಎಂದು ಸುರೇಶ್ ಹೇಳಿದರು.
ಎಲ್ಲರೂ ಡಿ.ಕೆ.ಶಿವಕುಮಾರ್ ಅವರಿಗೆ ಮತ ಹಾಕಬೇಕು ಮತ್ತು ಹಾಕಿಸಬೇಕು. ಈ ಮೂಲಕ ರಾಜ್ಯದ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಅಭಿವೃದ್ಧಿ ಜತೆಗೆ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…