ಮುಂಬೈ: ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಸಂಸದರಾದ ಸುನಿಲ್ ತಾತ್ಕರೆ, ಪ್ರಫುಲ್ ಪಟೇಲ್ ಅವರ ಹೆಸರನ್ನು ಪಕ್ಷದ ಸಂಸದರ ಪಟ್ಟಿಯಿಂದ ತೆಗೆದುಹಾಕುವುದಾಗಿ ಪಕ್ಷದ ಮುಖಂಡ ಶರದ್ ಪವಾರ್ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಶರದ್ ಪವಾರ್, ಎನ್ ಸಿಪಿಯಿಂದ ಇಬ್ಬರೂ ಸಂಸದರನ್ನು ತೆಗೆದುಹಾಕಿದ್ದೇವೆ ಎಂದು ಘೋಷಿಸಿದ್ದಾರೆ.
ಸಂಸದರನ್ನು ಅನರ್ಹಗೊಳಿಸುವಂತೆ ಎನ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಆಗ್ರಹಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪಟೇಲ್, ಎನ್ ಸಿಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಜಯಂತ್ ಪಾಟೀಲ್ ಬದಲು ತಾತ್ಕರೆ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.
I, as the National President, Nationalist Congress Party hereby order removal of the names of Shri Sunil Tatkare and Shri Praful Patel from the Register of Members of NCP Party for anti-party activities.@praful_patel @SunilTatkare
— Sharad Pawar (@PawarSpeaks) July 3, 2023
ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಭಾನುವಾರ ನಡೆದ ತಮ್ಮ ಸಂಬಂಧಿ ಅಜಿತ್ ಪವಾರ್ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದಕ್ಕಾಗಿ ಮುಂಬೈ ವಿಭಾಗೀಯ ಎನ್‌ಸಿಪಿ ಮುಖ್ಯಸ್ಥ ನರೇಂದ್ರ ರಾಥೋಡ್, ಅಕೋಲಾ ನಗರ ಜಿಲ್ಲಾ ಮುಖ್ಯಸ್ಥ ವಿಜಯ್ ದೇಶಮುಖ್ ಮತ್ತು ರಾಜ್ಯ ಸಚಿವ ಶಿವಾಜಿರಾವ್ ಗರ್ಜೆ ಅವರನ್ನು ಶರದ್ ಪವಾರ್ ಇಂದು ಉಚ್ಛಾಟಿಸಿದ್ದಾರೆ.