ಮೊನ್ನೆಯಷ್ಟೇ ( ಡಿಸೆಂಬರ್ 3 ) ಪ್ರಕಟಗೊಂಡ ತೆಲಂಗಾಣ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ 119 ವಿಧಾನಸಭಾ ಕ್ಷೇತ್ರಗಳ ಪೈಕಿ ಒಟ್ಟು 64 ಕ್ಷೇತ್ರಗಳಲ್ಲಿ ಗೆಲ್ಲುವುದರ ಮೂಲಕ ಸ್ಪಷ್ಟ ಬಹುಮತ ಸಾಧಿಸಿತು. ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ರೇವಂತ್ ರೆಡ್ಡಿ ಈ ಬಾರಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ಕೆಲಸಗಳನ್ನು ಮುಂದಾಳತ್ವ ವಹಿಸಿಕೊಂಡು ಮಾಡಿದರು.
ಇನ್ನು ಈ ಬಾರಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಎಂದು ಈ ಹಿಂದಿನಿಂದಲೂ ಪರೋಕ್ಷವಾಗಿ ಗುರುತಿಸಿಕೊಂಡಿದ್ದ ರೇವಂತ್ ರೆಡ್ಡಿ ಇದೀಗ ಅಧಿಕೃತವಾಗಿ ತೆಲಂಗಾಣದ ಸಿಎಂ ಎಂದು ಆಯ್ಕೆಯಾಗಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಸಭೆಯ ಬಳಿಕ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ. ರೇವಂತ್ ರೆಡ್ಡಿ ಡಿಸೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…
ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…
ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…
ನಾಲ್ವರು ನಿವೃತ್ತ ಪೊಲೀಸ್ ಅಧಿಕಾರಿಗಳ ನೇತೃತ್ವದ ಕ್ಷಿಪ್ರ ಕಾರ್ಯಪಡೆ ರಚನೆಗೆ ಒಪ್ಪಿಗೆ ಮೈಸೂರು: ಶಿಕ್ಷಣ, ಸಾಮಾಜಿಕ, ಆರೋಗ್ಯ ಮತ್ತಿತರ ಸೇವಾ…
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…