ಬೆಂಗಳೂರು : ಸಮಾನತೆ ಪ್ರೋತ್ಸಾಹಿಸದ ಅಥವಾ ಮನುಷ್ಯನ ಘನತೆಯನ್ನು ಖಾತ್ರಿಗೊಳಿಸದ ಯಾವುದೇ ಧರ್ಮ ಧರ್ಮವಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಸನಾತನ ಧರ್ಮ ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಕುರಿತು ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ನನ್ನ ಪ್ರಕಾರ, ಸಮಾನ ಹಕ್ಕುಗಳನ್ನು ನೀಡದ ಅಥವಾ ನಿಮ್ಮನ್ನು ಮನುಷ್ಯರಂತೆ ನಡೆಸಿಕೊಳ್ಳದ ಯಾವುದೇ ಧರ್ಮ ಕಾಯಿಲೆಯಷ್ಟೇ ಕೆಟ್ಟದು ಎಂದರು. ಈ ಮೂಲಕ ಉದಯ್ ಸ್ಟಾಲಿನ್ ಅವರ ಹೇಳಿಕೆಯನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡರು.
ಉದಯನಿಧಿ ಸ್ಟಾಲಿನ್ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರು ಉದಯನಿಧಿ ವಿರುದ್ಧ ತಿರುಗಿಬಿದಿದ್ದರೆ, ಕೆಲ ವಿರೋಧ ಪಕ್ಷಗಳ ನಾಯಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ಮೌನ ವಹಿಸಿದ್ದಾರೆ.
ಇದೇ ವೇಳೆ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಂಡಿಯಾ ಮೈತ್ರಿಕೂಟದಿಂದ ಗಮನ ಬೇರೆಡೆ ಸೆಳೆಯುವ ತಂತ್ರವಾಗಿದೆ. ಬಿಜೆಪಿಯವರು ಭಯಗೊಂಡಿದ್ದಾರೆ. ಕೋವಿಡ್ ಸಾಂಕ್ರಾಮಿಕ, ಮಣಿಪುರ ಅಥವಾ ಚೈನಾ ಒಳನುಸುಳಿದಾಗ ವಿಶೇಷ ಸಂಸತ್ ಅಧಿವೇಶನವನ್ನು ಅವರು ಕರೆಯಲಿಲ್ಲ. ಒಂದು ರಾಷ್ಟ್ರ, ಒಂದು ಚುನಾವಣೆಗಾಗಿ ಐದು ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಲೋಕಸಭಾ ಸಂಶೋಧನಾ ವಿಭಾಗವು ಸೂಚಿಸಿದ ಸಾಧಕ-ಬಾಧಕಗಳನ್ನು ನೋಡುವಂತೆ ಪ್ರಧಾನ ಮಂತ್ರಿ ಮತ್ತು ಕೇಂದ್ರ ಸರ್ಕಾರದ ಬಳಿ ಮನವಿ ಮಾಡುವುದಾಗಿ ತಿಳಿಸಿದರು.
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನಲ್ಲಿ 377 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಒಟ್ಟು 377 ಪ್ರಕರಣಗಳ ಪೈಕಿ…
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…