ಕೋವಿಡ್‌ ಸಂದರ್ಭದಲ್ಲಿ ಸಿಎಂ ಬದಲಾವಣೆ ಸರಿಯಲ್ಲ: ಶಾಸಕ ಅಪ್ಪಚ್ಚು ರಂಜನ್‌

ಕೊಡಗು: ಕೋವಿಡ್‌ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಸರಿಯಲ್ಲ ಎಂದು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್‌ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಸಿಎಂ ಬದಲಾವಣೆಯಲ್ಲಿ ಗುಂಪುಗಾರಿಕೆ ವಿಚಾರವಾಗಿ ನನಗೆ ಗೊತ್ತಿಲ್ಲ. ಮುಖ್ಯಮಂತ್ರಿ ಬದಲಾಗಬೇಕೋ ಬೇಡವೋ ಎನ್ನುವುದು ಹೈಕಮಾಂಡ್‌ಗೆ ಬಿಟ್ಟಿದ್ದು. ಕೋವಿಡ್ ಸಮಯದಲ್ಲಿ ಮುಖ್ಯಮಂತ್ರಿ ಬದಲಾಣೆ ವಿಚಾರ ಸರಿಯಲ್ಲ. ನನ್ನ ಪ್ರಕಾರ ಯಾವುದೇ ಗುಂಪುಗಾರಿಕೆ ನಡೆಯುತ್ತಿಲ್ಲ ಎಂದು ತಿಳಿಸಿದರು.

× Chat with us