Mysore
23
scattered clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಜೂನ್ 27ರಿಂದಲೇ ‘ಗೃಹಲಕ್ಷ್ಮೀ’ ಅರ್ಜಿ ಪ್ರಕ್ರಿಯೆ ಆರಂಭ: ಲಕ್ಷ್ಮೀ ಹೆಬ್ಬಾಳ್ಕರ್

ಮೈಸೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು(ಜೂನ್ 24) ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ.

ವಿಶೇಷ ಪೂಜೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್​ ತಯಾರಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂನ್ 27ರಿಂದ ‘ಗೃಹಲಕ್ಷ್ಮೀ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್​ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ಬರುತ್ತದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರ. ಇದರಲ್ಲಿ ಯಾವುದೇ ಗೊಂದಲಗಳು ಬೇಡ. ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಮೈಸೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!