ಮೈಸೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಂದು(ಜೂನ್ 24) ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದಿದ್ದಾರೆ.
ವಿಶೇಷ ಪೂಜೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ತಯಾರಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂನ್ 27ರಿಂದ ‘ಗೃಹಲಕ್ಷ್ಮೀ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ಬರುತ್ತದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರ. ಇದರಲ್ಲಿ ಯಾವುದೇ ಗೊಂದಲಗಳು ಬೇಡ. ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಮೈಸೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…