ಮೈಸೂರು: ನಾಡ ಹಬ್ಬ ದಸರಾ ಸಂದರ್ಭದಲ್ಲಿ ಸತತ ಎಂಟು ಬಾರಿ ಅಂಬಾರಿಯನ್ನು ಹೊತ್ತ ಅರ್ಜುನ ಅನೆ ಮೃತಪಟ್ಟಿದೆ.
ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ನಾಲ್ಕು ಸಾಕಾನೆಗಳೊಂದಿಗೆ ಸೋಮವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದೆ.
ಒಂಟಿಸಲಗ ದಾಳಿ ಮಾಡುತ್ತಿದ್ದಂತೆಯೇ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಈ ವೇಳೆ ಅರ್ಜುನ ಮಾತ್ರ ಒಂಟಿಸಲಗದ ಜತೆ ಕಾದಾಟ ನಡೆಸಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.