ನವದೆಹಲಿ: ಸಿಖ್ ಮೂಲಭೂತವಾದಿ ಪ್ರಚಾರಕ ಅಮೃತಪಾಲ್ ಸಿಂಗ್ ಅವರ ಪತ್ನಿ ಕಿರಣ್‌ದೀಪ್ ಕೌರ್ ಅವರನ್ನು ಪಂಜಾಬ್ ಪೊಲೀಸರು ಬಂಧಿಸಿದ್ದಾರೆ.
ಲಂಡನ್‌ಗೆ ತೆರಳಲು ಮುಂದಾಗಿದ್ದ ಕಿರಣ್‌ದೀಪ್ ಕೌರ್ ಅವರನ್ನು ಅಮೃತಸರದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಕಿರಣ್‌ದೀಪ್ ಕೌರ್ ಅವರು ಮಧ್ಯಾಹ್ನ 2:30ಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಬರ್ಮಿಂಗ್‌ಹ್ಯಾಮ್‌ಗೆ ಪ್ರಯಾಣಿಸಬೇಕಿತ್ತು. ಮಧ್ಯಾಹ್ನ 12:20ರ ಸುಮಾರಿಗೆ ಎಲ್‌ಒಸಿ ಮೂಲಕ ಪ್ರಯಾಣಿಸಲು ಕೌರ್ ಅವರಿಗೆ ಅನುಮತಿ ಇರಲಿಲ್ಲ. ಹಾಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದರು ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಅಮೃತಪಾಲ್ ಸಿಂಗ್ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಪೊಲೀಸರು ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…