ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸೂರಜ್ ರೇವಣ್ಣ ಅವರನ್ನು ಪೊಲೀಸರು ಕರೆತಂದು ವಿಚಾರಣೆ ನಡೆಸಿದ್ದಾರೆ
ಲೈಂಗಿಕ ಕಿರುಕುಳಕೊಳಗಾದ ಸಂತ್ರಸ್ಥನ ದೂರಿನ ಮೇರೆಗೆ ನೆನ್ನೆ ತಡ ರಾತ್ರಿ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಪೊಲೀಸರು ವಿಚಾರಣೆ ನಡೆಸಿದರು ಎನ್ನಲಾಗಿದೆ.
ಮೂಲಗಳ ಪ್ರಕಾರ ಸೂರಜ್ ರೇವಣ್ಣ ಅವರನ್ನು ಇಂದು ಮುಂಜಾನೆ ೪ ಗಂಟೆಯವರೆಗೆ ಪೊಲೀಸರು ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಯಾವುದೇ ಕ್ಷಣದಲ್ಲಾದೃೂ ಸೂರಜ್ ರೇವಣ್ಣ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಮಾಹಿತಿ ತಿಳಿದು ಬಂದಿದೆ.