BREAKING NEWS

16ನೇ ಹಣಕಾಸು ಆಯೋಗದ ಮುಖ್ಯಸ್ಥರಾಗಿ ಅರವಿಂದ್ ಪನಗರಿಯಾ ನೇಮಕ

ನವದೆಹಲಿ: ನೀತಿ ಆಯೋಗ್​ನ ಮಾಜಿ ಉಪಾಧ್ಯಕ್ಷ ಅರವಿಂದ್ ಪನಗರಿಯಾ ಅವರನ್ನು ಸರ್ಕಾರ 16 ನೇ ಹಣಕಾಸು ಆಯೋಗದ ಮುಖ್ಯಸ್ಥ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ಫೈನಾನ್ಸ್ ಕಮಿಷನ್ ಮುಖ್ಯಸ್ಥ ಸ್ಥಾನಕ್ಕೆ ಪನಗರಿಯಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹೊರಡಿಸಿದ್ದ ಆದೇಶವನ್ನು ಹಣಕಾಸು ಇಲಾಖೆ ಇಂದು (ಭಾನುವಾರ) ಅಧಿಸೂಚನೆ ಹೊರಡಿಸಿದೆ. ಭಾರತೀಯ ಅಮೆರಿಕನ್ ಆರ್ಥಿಕ ತಜ್ಞರಾಗಿರುವ ಅರವಿಂದ್ ಪನಗರಿಯಾ 2015ರ ಜನವರಿಯಿಂದ 2017ರ ಆಗಸ್ಟ್ ತಿಂಗಳವರೆಗೆ ನೀತಿ ಆಯೋಗ್​ನಲ್ಲಿ ಸೇವೆ ಸಲ್ಲಿಸಿದ್ದರು.ಮೂಲತಃ ಅರವಿಂದ್ ಪನಗರಿಯಾ ಅವರು ರಾಜಸ್ಥಾನದವರಾಗಿದ್ದು, ಸದ್ಯ ಅಮೆರಿಕದ ವಿವಿಯೊಂದರಲ್ಲಿ ಪೊಲಿಟಿಕಲ್, ಎಕನಾಮಿಕ್ಸ್ ಭೋದಕರಾಗಿದ್ದಾರೆ.

16ನೇ ಹಣಕಾಸು ಆಯೋಗದ ಕಾರ್ಯದರ್ಶಿ ಸ್ಥಾನಕ್ಕೆ ಋತ್ವಿಕ್ ರಂಜನಮ್ ಪಾಂಡೆ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.

ಹಣಕಾಸು ಆಯೋಗದ ಇತರ ಸದಸ್ಯರ ಹೆಸರನ್ನು ಪ್ರತ್ಯೇಕವಾಗಿ ಘೋಷಿಸುವ ಸಾಧ್ಯತೆಯಿದೆ.

ಹಣಕಾಸು ಆಯೋಗದ ಜವಾಬ್ದಾರಿ ಏನು?

ಕೇಂದ್ರ ಮತ್ತು ರಾಜ್ಯಗಳ ಮಧ್ಯೆ ತೆರಿಗೆ ಆದಾಯದ ಹಂಚಿಕೆಗೆ ಸೂತ್ರ ರೂಪಿಸುವುದು ಹಣಕಾಸು ಆಯೋಗದ ಜವಾಬ್ದಾರಿ. ಐದು ವರ್ಷಕ್ಕೆಂದು ಆಯೋಗ ತೆರಿಗೆ ಹಂಚಿಕೆ ಸೂತ್ರಗಳನ್ನು ಶಿಫಾರಸು ಮಾಡುತ್ತದೆ. ಸರ್ಕಾರ ಈ ಶಿಫಾರಸುಗಳ ಆಧಾರದ ಮೇಲೆ ತೆರಿಗೆ ಹಂಚಿಕೆ ಮಾಡುತ್ತದೆ.

16ನೇ ಹಣಕಾಸು ಆಯೋಗ ಮಾಡುವ ಶಿಫಾರಸುಗಳು 2026ರ ಏಪ್ರಿಲ್​ನಿಂದ ಜಾರಿ ಆಗುತ್ತವೆ. ಈಗ ನೇಮಕ ಮಾಡಲಾಗಿರುವ ಈ ಆಯೋಗವು 2025ರ ಅಕ್ಟೋಬರ್ 31ರವರೆಗೆ ಮಾತ್ರ ಅಸ್ತಿತ್ವದಲ್ಲಿರುತ್ತದೆ. ಅಷ್ಟರೊಳಗೆ ಸರ್ಕಾರಕ್ಕೆ ತೆರಿಗೆ ಹಂಚಿಕೆಯ ಸೂತ್ರಗಳನ್ನು ಶಿಫಾರಸು ಮಾಡಬೇಕಾಗುತ್ತದೆ.

ಈಗ ಆಗುತ್ತಿರುವ ತೆರಿಗೆ ಹಂಚಿಕೆ ಸೂತ್ರವನ್ನು 15ನೇ ಹಣಕಾಸು ಆಯೋಗ ರೂಪಿಸಿತ್ತು. 2017ರ ನವೆಂಬರ್​ನಲ್ಲಿ ಈ ಆಯೋಗದ ರಚನೆಯಾಗಿತ್ತು. ಎನ್ ಕೆ ಸಿಂಗ್ ಮುಖ್ಯಸ್ಥರಾಗಿದ್ದರು. ಇದರ ವ್ಯಾಪ್ತಿಯನ್ನು ಐದು ವರ್ಷದ ಬದಲು ಆರು ವರ್ಷಕ್ಕೆ ಹೆಚ್ಚಿಸಲಾಗಿತ್ತು. 2025-26ರವರೆಗೆ ಇದರ ಶಿಫಾರಸುಗಳು ಜಾರಿಯಲ್ಲಿರುತ್ತವೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

7 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago