ನವದೆಹಲಿ: ಅದಾನಿ ಸಮೂಹ ಸಂಸ್ಥೆಗಳ ಮುಖ್ಯಸ್ಥರಾದ ಗೌತಮ್ ಅದಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಭಾರತದ ಮತ್ತು ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನಲ್ಲಿ ಹೊರಹೊಮ್ಮಿದ್ದಾರೆ.
ಜಗತ್ತಿನ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ 12ನೇ ಸ್ಥಾನದಲ್ಲಿ ಅದಾನಿ ಇದ್ದರೆ ಅಂಬಾನಿ 13ನೇ ಸ್ಥಾನದಲ್ಲಿದ್ದಾರೆ. ಒಟ್ಟು 97.6 ಬಿಲಿಯನ್ ಅಮೆರಿಕನ್ ಡಾಲರ್ ಸಂಪತ್ತಿನ ಒಡೆಯರಾಗಿದ್ದಾರೆ ಅದಾನಿ.
ಅತ್ತ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದು ಅವರು ಒಟ್ಟು ಸಂಪತ್ತಿನ ಮೌಲ್ಯ 97 ಬಿಲಿಯನ್ ಅಮೆರಿಕನ್ ಡಾಲರ್ ಆಗಿದೆ.
ಅದಾನಿ ಸಂಸ್ಥೆಗಳು ಅವ್ಯವಹಾರ ನಡೆಸಿವೆ ಎಂಬ ಹಿಂಡೆನ್‌ಬರ್ಗ್ ವರದಿಯನ್ನಾಧರಿಸಿ ಸಂಸ್ಥೆಯ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದ ನಂತರ ಅದಾನಿ ಷೇರುಗಳ ಬೆಲೆ ಏರಿಕೆ ಕಂಡಿತ್ತು.
ಇದಕ್ಕಿಂತ ಒಂದು ದಿನ ಹಿಂದ ಅದಾನಿ ಸಂಪತ್ತು ಮೌಲ್ಯ ರೂ. 8.98 ಲಕ್ಷ ಕೋಟಿ ಇದ್ದರೆ ಒಂದೇ ದಿನದಲ್ಲಿ ಅದು ರೂ. 9.37 ಲಕ್ಷ ಕೋಟಿಗೆ ಏರಿಕೆಯಾಗಿದೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…