Mysore
31
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

4 ರಾಜ್ಯಗಳ ಫಲಿತಾಂಶ: ಅಂಚೆ ಮತಗಳ ಎಣಿಕೆ ಆರಂಭ

ಕಳೆದ ಒಂದು ತಿಂಗಳ ಅವಧಿಯಲ್ಲಿ ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ್‌ ಹಾಗೂ ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಿದ್ದು, ಇಂದು ಮಧ್ಯಪ್ರದೇಶ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್‌ಗಢ್‌ ರಾಜ್ಯಗಳ ಫಲಿತಾಂಶ ಹೊರಬೀಳಲಿದ್ದು, ನಾಳೆ ( ಡಿಸೆಂಬರ್‌ 4 ) ಮಿಜೋರಾಂ ರಾಜ್ಯದ ಫಲಿತಾಂಶ ಹೊರಬೀಳಲಿದೆ.

ಇನ್ನು ಈ ಎಲ್ಲಾ ರಾಜ್ಯಗಳ ಮತ ಎಣಿಕೆ ಕಾರ್ಯ ಬೆಳ್ಳಂಬೆಳಗ್ಗೆ 8 ಗಂಟೆಗೆ ಆರಂಭವಾಗಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ಶುರುವಾಗಿದೆ. ಈ ಬಾರಿ ಕರ್ನಾಟಕದಲ್ಲಿ ವಿವಿಧ ಭಾಗ್ಯಗಳನ್ನು ಘೋಷಣೆ ಮಾಡಿ ಅಧಿಕಾರದ ಚುಕ್ಕಾಣೆ ಹಿಡಿದ ರೀತಿ ಬೇರೆಡೆ ಸಹ ಅಧಿಕಾರಕ್ಕೆ ಬರುವ ಉದ್ದೇಶದಲ್ಲಿದ್ದು, ಬಿಜೆಪಿ ಸಹ ಗೆಲುವಿನತ್ತ ಚಿತ್ತ ನೆಟ್ಟಿದೆ.

ಇನ್ನು ಮೊನ್ನೆಯಷ್ಟೇ ಪ್ರಕಟಗೊಂಡಿದ್ದ ಎಕ್ಸಿಟ್‌ ಪೋಲ್‌ಗಳಲ್ಲಿ ಹೆಚ್ಚಾಗಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂಬ ಫಲಿತಾಂಶ ಹೆಚ್ಚಾಗಿ ಬಂದಿದ್ದು, ಮಧ್ಯಪ್ರದೇಶದಲ್ಲಿ ಅತಂತ್ಯವಾಗುವ ಸಾಧ್ಯತೆ ಹೆಚ್ಚಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!