ಇಂದು ( ಡಿಸೆಂಬರ್ 3 ) ರಾಜಸ್ಥಾನ್, ತೆಲಂಗಾಣ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢ್ ಕ್ಷೇತ್ರಗಳ ವಿಧಾನಸಭೆಯ ಮತ ಎಣಿಕೆ ನಡೆಯುತ್ತಿದ್ದು, ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಆರಂಭಗೊಂಡಿದೆ. ಸದ್ಯ ಮತಎಣಿಕೆಯಾಗಿ 3 ಗಂಟೆಗಳು ಮುಕ್ತಾಯಗೊಂಡಿದ್ದು, ಬೆಳಗ್ಗೆ 11 ಗಂಟೆ ಸಮಯಕ್ಕೆ 4 ರಾಜ್ಯಗಳ ಮತಎಣಿಕೆಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ ಕೇವಲ ಒಂದು ರಾಜ್ಯದಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.
ಹೌದು, ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢ ಈ ಮೂರು ರಾಜ್ಯಗಳಲ್ಲಿಯೂ ಬಿಜೆಪಿ ಮುನ್ನಡೆಯನ್ನು ಸಾಧಿಸಿದ್ದರೆ, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಬೆಳಗ್ಗೆ 11 ಗಂಟೆಗೆ 4 ರಾಜ್ಯಗಳ ಮತಎಣಿಕೆಯ ವಿವರ ಈ ಕೆಳಕಂಡಂತಿದೆ..
ಛತ್ತೀಸ್‌ಗಢ : ಒಟ್ಟು ಸ್ಥಾನ – 90, ಮ್ಯಾಜಿಕ್ ನಂಬರ್ – 46, ಬಿಜೆಪಿ 47, ಕಾಂಗ್ರೆಸ್ 41,ಇತರೆ 2
ರಾಜಸ್ಥಾನ : ಒಟ್ಟು ಸ್ಥಾನ – 199, ಮ್ಯಾಜಿಕ್ ನಂಬರ್ – 100, ಬಿಜೆಪಿ 114, ಕಾಂಗ್ರೆಸ್ 70, ಇತರೆ 15
ಮಧ್ಯಪ್ರದೇಶ : ಒಟ್ಟು ಸ್ಥಾನ – 230, ಮ್ಯಾಜಿಕ್ ನಂಬರ್ – 116, ಬಿಜೆಪಿ 139, ಕಾಂಗ್ರೆಸ್ 90, ಇತರೆ 1
ತೆಲಂಗಾಣ : ಒಟ್ಟು ಸ್ಥಾನ – 119, ಮ್ಯಾಜಿಕ್ ನಂಬರ್ – 60, ಕಾಂಗ್ರೆಸ್ 66, ಬಿಆರ್‌ಎಸ್ 42, ಬಿಜೆಪಿ 8, ಎಐಎಂಐಎಂ 3
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…